

ಮದ್ದೂರು: ಮಹರ್ಷಿ ವಾಲ್ಮೀಕಿಯ ತತ್ವ, ಸಿದ್ಧಾಂತಗಳನ್ನು ಯುವಕರು ಅನುಸರಿಸಬೇಕು. ರಾಮಾಯಣವೆಂಬ ಮಹಾ ಗ್ರಂಥವನ್ನು ರಚಿಸುವ ಮೂಲಕ ವಾಲ್ಮೀಕಿ ಆದರ್ಶಪ್ರಾಯವಾಗಿದ್ದಾರೆ ಎಂದು ತಹಸೀಲ್ದಾರ್ ಟಿ.ಎನ್.ನರಸಿಂಹಮೂರ್ತಿ ಹೇಳಿದರು.
ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು. ವಾಲ್ಮೀಕಿ ಅವರ ಜೀವನ ಯುವಕರಿಗೆ ಒಂದು ಪಾಠವಾಗಿದೆ. ವಾಲ್ಮೀಕಿ ಅವರ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಾಕ್ಷರತಾ ಸಂಪನ್ಮೂಲ ವ್ಯಕ್ತಿ ತರೀಕೆರೆ ರಾಜಮುಡಿ ವಿಶೇಷ ಉಪನ್ಯಾಸ ನೀಡಿದರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಅಭಿನಂದಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳಿರಯ್ಯ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸಿ.ನಾಗಲಕ್ಷ್ಮೀ, ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ನಾರಾಯಣ್, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷ ವಿ.ಸಿ.ಉಮಾಶಂಕರ್, ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ಮಹದೇವು, ಪುರಸಭಾ ಸದಸ್ಯೆ ಪ್ರಮೀಳಾ, ಮುಖಂಡರಾದ ಆತಗೂರು ವೆಂಕಟಾಚಲಯ್ಯ, ಕೆ.ಟಿ. ಶಿವಕುಮಾರ್, ಡಿ.ಸಿ.ಮಹೇಂದ್ರ ಇದ್ದರು.