ಯುವಕರು ದುಶ್ಚಟಗಳಿಗೆ ಬಲಿಯಾಗದಿರಲಿ

Untitled design (6)
ಹರಪನಹಳ್ಳಿಯ ವಾಲ್ಮೀಕಿ ನಗರದ ಸಮುದಾಯ ಭವನದಲ್ಲಿ ಎಸ್‌ಕೆಡಿಆರ್‌ಡಿಪಿ ವತಿಯಿಂದ ಭಾನುವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ತಾಪಂ ಮಾಜಿ ಸದಸ್ಯ ಹುಲಿಕಟ್ಟಿ ಚಂದ್ರಪ್ಪ ಉದ್ಘಾಟಿಸಿದರು. ವಲಯ ಮೇಲ್ವಿಚಾರಕ ರಕ್ಷೀತ್, ಆರೋಗ್ಯಧಿಕಾರಿ ವಿಪುಲ್, ಸೇವಾ ಪ್ರತಿನಿಧಿ ಕೆ.ಕರಿಬಸಮ್ಮ ಇದ್ದರು.
Published on

ಹರಪನಹಳ್ಳಿ: ದೈಹಿಕ, ಮಾನಸಿಕವಾಗಿ ಸದೃಢರಾಗಲು ಪ್ರತಿದಿನ ವ್ಯಾಯಾಮ, ಯೋಗಾಭ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ತಾಪಂ ಮಾಜಿ ಸದಸ್ಯ ಹುಲಿಕಟ್ಟಿ ಚಂದ್ರಪ್ಪ ಹೇಳಿದರು.


ಪಟ್ಟಣದ ವಾಲ್ಮೀಕಿನಗರದ ಹುಲ್ಲುಗರಡಿಕೇರಿಯ ಸಮುದಾಯ ಭವನದಲ್ಲಿ ಎಸ್‌ಕೆಡಿಆರ್‌ಡಿಪಿಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸಂಘದ ಸದಸ್ಯರಿಗೆ ಭಾನುವಾರ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ದುಶ್ಚಟಗಳಿಗೆ ಬಲಿಯಾಗದಂತೆ ಪೋಷಕರು ನೋಡಿಕೊಳ್ಳಬೇಕು. ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಿ ಉನ್ನತ ಹುದ್ದೆ ಪಡೆಯುವಂತೆ ಪ್ರೋತ್ಸಾಹಿಸಬೇಕು. ಆರೋಗ್ಯದ ಕಡೆಗೆ ಎಲ್ಲರೂ ಕಾಳಜಿವಹಿಸಬೇಕು ಎಂದರು.


ಆರೋಗ್ಯಧಿಕಾರಿ ವಿಪುಲ್ ಮಾತನಾಡಿ, ದೃಷ್ಟಿ ಇಲ್ಲದೆ ಜೀವನವನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ ,ಆದ್ದರಿಂದ ಕಣ್ಣುಗಳ ಬಗ್ಗೆ ಕಾಳಜಿ ವಹಿಸಬೇಕು. ಎಸ್‌ಕೆಡಿಆರ್‌ಡಿಪಿ ಸಂಸ್ಥೆಯು ತಾಲೂಕಿನಲ್ಲಿ 4 ರಿಂದ 5 ಸಾವಿರ ಸಂಘಗಳನ್ನು ರಚಿಸಿ ಸಾಲ ಸೌಲಭ್ಯ ನೀಡುತ್ತಿದೆ.

ಇದರಿಂದ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು. ವಲಯ ಮೇಲ್ವಿಚಾರಕ ರಕ್ಷೀತ್, ಸೇವಾ ಪ್ರತಿನಿಧಿ ಕೆ.ಕರಿಬಸಮ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net