ಯುವ ಸಮೂಹ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿ

21 yelandur 06
ಯಳಂದೂರು ಪಟ್ಟಣದಲ್ಲಿ ಗುರುವಾರ ಪಪಂ ಸಿಬ್ಬಂದಿ ಬೈಕ್ ಜಾಥಾದಲ್ಲಿ ಪಾಲ್ಗೊಳ್ಳುವ ಮೂಲಕ ಮತದಾನದ ಮಹತ್ವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
Published on

ಯಳಂದೂರು: ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸಬೇಕೆಂಬ ನಿಟ್ಟಿನಲ್ಲಿ ಪಟ್ಟಣ ಪಂಚಾಯಿತಿ ನೌಕರರು ಗುರುವಾರ ಬೈಕ್ ಜಾಥಾ ನಡೆಸುವ ಮೂಲಕ ಜಾಗೃತಿ ಮೂಡಿಸಿದರು.

ಪಟ್ಟಣ ಪಂಚಾಯಿತಿ ಕಚೇರಿಯಿಂದ ಹೊರಟ ಜಾಥಾ ಪಟ್ಟಣದ ಕೆಕೆ, ಹಳೇ ಅಂಚೆ ಕಚೇರಿ ರಸ್ತೆ, ಬಳೇಪೇಟೆ, ದೊಡ್ಡಂಗಡಿ ಬೀದಿ, ಬಸ್ ನಿಲ್ದಾಣ ಹಾಗೂ ಸಂತೇಮರಹಳ್ಳಿ ರಸ್ತೆಯಲ್ಲಿ ಸಂಚರಿಸುವ ಮೂಲಕ ಜಾಗೃತಿ ಮೂಡಿಸಿತು.

ಪಪಂ ಮುಖ್ಯಾಧಿಕಾರಿ ಮಹೇಶ್‌ಕುಮಾರ್ ಮಾತನಾಡಿ, ಭಾರತ ವಿಶ್ವದಲ್ಲೇ ಶ್ರೇಷ್ಠ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ರಾಷ್ಟ್ರ. ಮತದಾನದ ಮೂಲಕ ನಮ್ಮನ್ನಾಳುವವರನ್ನು ಆಯ್ಕೆ ಮಾಡುವ ಈ ಪ್ರಕ್ರಿಯೆಯನ್ನು ಹಬ್ಬವೆಂದು ಸಂಭ್ರಮಿಸಬೇಕು ಎಂದರು.

ನಮ್ಮ ರಾಷ್ಟ್ರದಲ್ಲಿ ಮತದಾರರ ಸಂಖ್ಯೆಗೆ ಅನುಗುಣವಾಗಿ ಮತದಾನ ನಡೆಯುತ್ತಿಲ್ಲ. ಶೇಕಡವಾರು ಮತದಾನದಲ್ಲಿ ನಾವು ಇನ್ನೂ ಹಿಂದೆ ಬಿದ್ದಿದ್ದೇವೆ. ಯುವ ಮತದಾರರು ಹೆಚ್ಚಾಗಿದ್ದರೂ ಮತದಾನ ಮಾಡುತ್ತಿಲ್ಲ. ಇದು ಬದಲಾಗಬೇಕು ಎಂದು ಹೇಳಿದರು.

ಜೆಇ ನಾಗೇಂದ್ರ, ಮಲ್ಲಿಕಾರ್ಜುನಸ್ವಾಮಿ, ರಘು ಸೇರಿದಂತೆ ಪಟ್ಟಣ ಪಂಚಾಯಿತಿ ಸಿಬ್ಬಂದಿ, ಪೌರ ಕಾರ್ಮಿಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net