ರಾಜ್ಯ- ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಜಯಗಳಿಸಲಿ

Mnd sports
Published on

ಮುಂಡಗೋಡ: ಶಿಕ್ಷಣದ ಜತೆಗೆ ಕ್ರೀಡೆಗಳಲ್ಲಿಯೂ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ಮಾಜಿ ಶಾಸಕ ವಿ.ಎಸ್. ಪಾಟೀಲ ಹೇಳಿದರು.

ತಾಲೂಕಿನ ಕರಗಿನಕೊಪ್ಪ ಗ್ರಾಮದ ಲೋಯೋಲ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಸೈನಿಕರು ಹಾಗೂ ಕ್ರೀಡಾಪಟುಗಳ ಆರೋಗ್ಯವು ಉತ್ತಮವಾಗಿರುತ್ತದೆ. ತಾಲೂಕಿನ ವಿದ್ಯಾರ್ಥಿಗಳು ಕಠಿಣ ಶ್ರಮವಹಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಜಯಗಳಿಸಿ ಕೀರ್ತಿ ತರಬೇಕು ಎಂದರು.

ಜಿಪಂ ಮಾಜಿ ಅಧ್ಯಕ್ಷ ರಾಮಕೃಷ್ಣ ಮೂಲಿಮನಿ, ಮಾಜಿ ಸದಸ್ಯ ಎಲ್.ಟಿ. ಪಾಟೀಲ, ಜಿ.ಎನ್. ನಾಯ್ಕ, ಜಾನ್ಸನ್ ಪಿಂಟೋ, ದಯಾನಂದ ನಾಯ್ಕ, ಪ್ರದೀಪ ಕುಲಕರ್ಣಿ, ರಮೇಶ ಅಂಬಿಗೇರ, ಶೀಲಾ ರಾಠೋಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net