ಪ್ರತಿ ಊರಲ್ಲೂ ಹಬ್ಬದಂತಾಗಲಿ ಸಮ್ಮೇಳನ

Ull_Kasapa
Published on

ವಿಜಯವಾಣಿ ಸುದ್ದಿಜಾಲ ಉಳ್ಳಾಲ

ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಪ್ರತಿ ಊರಿನಲ್ಲೂ ಕನ್ನಡದ ಹಬ್ಬದಂತೆ ಸಂಭ್ರಮಿಸುವಂತಾಗಲಿ. ನಾವೆಲ್ಲ ಕನ್ನಡಿಗರು ಎಂಬ ಸಂಭ್ರಮ, ಅಭಿಮಾನವನ್ನು ಸಮ್ಮೇಳನ ಉಂಟು ಮಾಡಲಿ ಎಂದು ಉಳ್ಳಾಲ ತಾಲೂಕು ತಹಸೀಲ್ದಾರ್ ಪುಟ್ಟರಾಜು ಹೇಳಿದರು.

ಮಂಡ್ಯದಲ್ಲಿ ನಡೆಯಲಿರುವ ಕಸಾಪ ಸಮ್ಮೇಳನ ಪ್ರಯುಕ್ತ ಆಗಮಿಸಿದ ಸಾಹಿತ್ಯ ರಥ ಉಳ್ಳಾಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ತೊಕ್ಕೊಟ್ಟಿನಲ್ಲಿ ಸ್ವಾಗತಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ಘಟಕಾಧ್ಯಕ್ಷ ಡಾ.ಧನಂಜಯ ಕುಂಬ್ಳೆ ಮಾತನಾಡಿ, ಸಾಹಿತ್ಯ ಸಮ್ಮೇಳನ ಯಾವುದೇ ಗೊಂದಲಗಳಿಲ್ಲದೆ ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಕನ್ನಡದ ವೈಚಾರಿಕತೆ ಪ್ರಚುರಪಡಿಸಲಿ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ದ.ಕ. ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಉಳ್ಳಾಲ ತಾಲೂಕು ಕಾರ್ಯನಿರ್ವಹಣಾಧಿಕಾರಿ ಗುರುದತ್ತ್, ನಗರ ಸಭಾಧ್ಯಕ್ಷೆ ಶಶಿಕಲಾ ಚೆಂಬುಗುಡ್ಡೆ, ಕೌನ್ಸಿಲರ್ ಅಸ್ಗರ್ ಅಲಿ, ಕಸಾಪ ಗೌರವ ಕಾರ್ಯದರ್ಶಿ ರವೀಂದ್ರ ರೈ ಕಲ್ಲಿಮಾರು, ಕೋಶಾಧಿಕಾರಿ ಚಂದ್ರಹಾಸ ರೈ ದೇರಳಕಟ್ಟೆ, ಹೋಬಳಿ ಅಧ್ಯಕ್ಷೆ ವಿಜಯಲಕ್ಷ್ಮೀ ಪ್ರಸಾದ ರೈ, ಪದಾಧಿಕಾರಿಗಳಾದ ತೋನ್ಸೆ ಪುಷ್ಕಳ ಕುಮಾರ್, ಗುಣಾಜೆ ರಾಮಚಂದ್ರ ಭಟ್, ಕಾರ್ಯದರ್ಶಿ ಎಡ್ವರ್ಡ್ ಲೋಬೋ, ಮುಖಂಡರಾದ ಪ್ರಸಾದ್ ರೈ ಕಲ್ಲಿಮಾರ್ ಉಪಸ್ಥಿತರಿದ್ದರು. ತ್ಯಾಗಂ ಹರೇಕಳ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net