ಬಿಜೆಪಿ ವಿರುದ್ಧ ಜನಾಂದೋಲನ ನಡೆಯಲಿ

SHREENIVAS MANE
Published on

ಹಾನಗಲ್ಲ: ಮಾನವೀಯತೆಯ ಉಳಿವಿಗಾಗಿ ಕಾಂಗ್ರೆಸ್ ಹೋರಾಡುತ್ತಿದ್ದರೆ, ಬಿಜೆಪಿ ದ್ವೇಷ ಹರಡಿ, ಭಾವನೆ ಕೆರಳಿಸಿ ರಾಜಕೀಯ ಸ್ವಾರ್ಥ ಸಾಧನೆಗೆ ಮುಂದಾಗಿದೆ. ಸಂವಿಧಾನಕ್ಕೆ ಅಪಚಾರ ಮಾಡುತ್ತಿದೆ. ಇಂಥ ಬಿಜೆಪಿ ವಿರುದ್ಧ ಜನಾಂದೋಲನ ನಡೆಸಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಡಿ. 27ರಂದು ಬೆಳಗಾವಿಯಲ್ಲಿ ನಡೆಯಲಿರುವ ಗಾಂಧಿ ಭಾರತ ಕಾಂಗ್ರೆಸ್ ಸಮಾವೇಶದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಶನಿವಾರ ಏರ್ಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರಕಬೇಕು, ಪ್ರತಿಯೊಬ್ಬರೂ ಸ್ವಾಭಿಮಾನಿಗಳಾಗಿ ಬದುಕಬೇಕು ಎಂದು 100 ವರ್ಷಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿ ಗಾಂಧೀಜಿ ನಿರ್ಣಯ ಕೈಗೊಂಡು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅಂಬೇಡ್ಕರ್ ಅವರು ಸಂವಿಧಾನ ರಚಿಸದೇ ಇದ್ದರೆ ಸದನವೇ ಇರುತ್ತಿರಲಿಲ್ಲ. ಡಿ. 27ರಂದು ಬೆಳಗಾವಿ ಮತ್ತೊಮ್ಮೆ ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗುತ್ತಿದೆ. ಅಂದು ನಡೆಯುವ ಗಾಂಧಿ ಭಾರತ ಕಾರ್ಯಕ್ರಮಕ್ಕೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಮಂಜು ಗೊರಣ್ಣನವರ, ನಗರ ಕಾಂಗ್ರೆಸ್ ಅಧ್ಯಕ್ಷ ಮತೀನ್ ಶಿರಬಡಗಿ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಪುರಸಭೆ ಅಧ್ಯಕ್ಷೆ ಮಮತಾ ಆರೆಗೊಪ್ಪ, ಉಪಾಧ್ಯಕ್ಷೆ ವೀಣಾ ಗುಡಿ, ಚಂದ್ರಪ್ಪ ಜಾಲಗಾರ, ಸಿದ್ದನಗೌಡ ಪಾಟೀಲ, ಈರಣ್ಣ ಬೈಲವಾಳ, ಗೀತಾ ಪೂಜಾರ, ಅನಿತಾ ಶಿವೂರ, ಶಿವು ಭದ್ರಾವತಿ, ಶಿವು ತಳವಾರ, ಆದರ್ಶ ಶೆಟ್ಟಿ, ಕಲವೀರಪ್ಪ ಪವಾಡಿ, ಪುಟ್ಟಪ್ಪ ನರೇಗಲ್, ಭರಮಣ್ಣ ಶಿವೂರ, ಮೆಹಬೂಬಅಲಿ ಬ್ಯಾಡಗಿ, ಸತ್ತಾರಸಾಬ್ ಅರಳೇಶ್ವರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net