ಕಾಂತರಾಜ್ ವರದಿ ಬಗ್ಗೆ ಪರ-ವಿರೋಧದ ಚರ್ಚೆ ಆಗಲಿ: ಸಚಿವ ಮಧು ಬಂಗಾರಪ್ಪ

madhu bangarappa press meet
ಸಚಿವ ಮಧು ಬಂಗಾರಪ್ಪ ಮಾತನಾಡಿದರು.
Published on

ಶಿವಮೊಗ್ಗ: ಕಾಂತರಾಜ್ ಆಯೋಗದ ವರದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಭಾನುವಾರ ಚಿತ್ರದುರ್ಗದ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶದಲ್ಲಿ ಸಿಎಂ ವರದಿ ಸ್ವೀಕರಿಸುವುದಾಗಿ ಹೇಳಿದ್ದಾರೆ. ಈ ಬಗ್ಗೆ ಪರ-ವಿರೋಧದ ಚರ್ಚೆ ನಡೆಯಲಿ. ವರದಿ ಕುರಿತು ಕಾಂಗ್ರೆಸ್ ಸರ್ಕಾರ ಒಳ್ಳೆಯ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ರಾಷ್ಟ್ರಪತಿ ದ್ರೌಪದಿ ಎಂದು ಸಿಎಂ ಸಿದ್ದರಾಮಯ್ಯ ಏಕವಚನದಲ್ಲಿ ಹೇಳಿರುವ ವಿಚಾರವನ್ನು ಅಪಾರ್ಥ ಮಾಡಿಕೊಳ್ಳಬಾರದು. ಅವರ ಬಾಡಿ ಲಾಂಗ್ವೇಜ್ ಅಗೌರವ ತರುವ ರೀತಿಯಲ್ಲಿ ಇರಲಿಲ್ಲ. ಆದರೆ ರಾಷ್ಟ್ರಪತಿ ಬಗೆಗಿನ ಸಿಎಂ ಹೇಳಿಕೆ ಬಗ್ಗೆ ನಾನು ಕ್ಷಮೆ ಕೇಳುತ್ತೇನೆ. ಪಾರ್ಲಿಮೆಂಟ್ ಮತ್ತು ಅಯೋಧ್ಯೆ ಕಾರ್ಯಕ್ರಮಗಳಿಗೆ ರಾಷ್ಟ್ರಪತಿ ಅವರನ್ನು ಆಹ್ವಾನಿಸಬೇಕಿತ್ತು ಎಂಬುದು ಅವರ ಹೇಳಿಕೆ ಹಿಂದಿನ ಉದ್ದೇಶವಾಗಿತ್ತು ಎಂದು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net