ಪಂಚ ಗ್ಯಾರಂಟಿಗಳಿಂದ ಅರ್ಹರು ವಂಚಿತರಾಗದಿರಲಿ

LXR GYARANTI
Published on

ಲಕ್ಷೆ್ಮೕಶ್ವರ: ಪಂಚ ಗ್ಯಾರಂಟಿಗಳಿಂದ ಬಡವರ ಜೀವನಮಟ್ಟ ಸುಧಾರಿಸಿದೆ. ಈ ಯೋಜನೆಗಳ ಅನುಷ್ಠಾನದಲ್ಲಿ ತಾಲೂಕು ಮುಂಚೂಣಿಯಲ್ಲಿದೆ ಎಂದು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಾಗರಾಜ ಮಡಿವಾಳರ ಹೇಳಿದರು.

ಪಟ್ಟಣದ ತಾಪಂ ಸಭಾಭವನದಲ್ಲಿ ಶುಕ್ರವಾರ ಏರ್ಪಾಟಾಗಿದ್ದ ತಾಲೂಕು ಮಟ್ಟದ ಗ್ಯಾರಂಟಿ ಸಮಿತಿ ಪದಾಧಿಕಾರಿಗಳ ಮತ್ತು ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿ, ತಾಲೂಕಿನಲ್ಲಿ ಶೇ. 100 ಪ್ರಗತಿ ಸಾಧಿಸಬೇಕು. ಇಲಾಖಾವಾರು ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು.

ಅನ್ನಭಾಗ್ಯ ಯೋಜನೆಯ ಸೌಲಭ್ಯವನ್ನು ಶೇ. 98 ಫಲಾನುಭವಿಗಳು ಪಡೆಯುತ್ತಿದ್ದಾರೆ ಎಂದರು. ಶಕ್ತಿ ಯೋಜನೆಯ ಬಗ್ಗೆ ಮಾಹಿತಿ ನೀಡಿದ ಸಾರಿಗೆ ಇಲಾಖೆ ಅಧಿಕಾರಿ ಅಶೋಕ ಅಣ್ಣಿಗೇರಿ, ತಾಲೂಕಿನಲ್ಲಿ ನಿತ್ಯ ಸರಾಸರಿ 68,496 ಜನರು ಸರ್ಕಾರಿ ಬಸ್​ನಲ್ಲಿ ಸಂಚಾರ ಮಾಡುತ್ತಿದ್ದಾರೆ. ಪ್ರತಿ ತಿಂಗಳು 4 ಕೋಟಿ ರೂ.ಗಳಿಗೂ ಹೆಚ್ಚು ಆದಾಯ ಬರುತ್ತಿದೆ ಎಂದರು.

ಉತ್ತಮ ಆದಾಯ ಬರುವುದರಿಂದ ಹೊಸ ಬಸ್​ಗಳು, ಹೆಚ್ಚಿನ ಸಾರಿಗೆ ವ್ಯವಸ್ಥೆ, ಬಸ್​ಗಳ ದುರಸ್ತಿ, ಬಸ್ ನಿಲ್ದಾಣದಲ್ಲಿ ಶೌಚಗೃಹ, ಸ್ವಚ್ಛತೆ ಕಾಪಾಡುವ ಕೆಲಸವಾಗಬೇಕು ಎಂದು ಶಿವರಾಜಗೌಡ ಹೇಳಿದರು.

ಅಂಗನವಾಡಿಗಳಲ್ಲಿ ಮಕ್ಕಳಿಗೆ ಮೊಟ್ಟೆ ಸೇರಿ ಸರಿಯಾದ ಆಹಾರ ಪೂರೈಕೆಯಾಗಬೇಕು. ಗೃಹಲಕ್ಷ್ಮಿ ಯೋಜನೆ ಎಲ್ಲರಿಗೂ ತಲುಪಬೇಕು ಎಂದು ಸಿಡಿಪಿಒ ಮೃತ್ಯುಂಜಯ ಗುಡ್ಡದನ್ವೇರಿ ಅವರಿಗೆ ಸೂಚಿಸಲಾಯಿತು.

ಹೆಸ್ಕಾಂ ಇಲಾಖೆ ಅಧಿಕಾರಿ ಮಹಾಂತೇಶ ಇಟಗಿ, ತಾಪಂ ಇಒ ಕೃಷ್ಣಪ್ಪ ಧರ್ಮರ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಆರ್.ಆರ್. ನದಾಫ್, ಕೆ.ಎನ್. ರಿತ್ತಿ, ಕಲ್ಲಪ್ಪ ಗಂಗಣ್ಣವರ, ರಮೇಶ ಬಾರಕೇರ, ಶಶಿಕಲಾ ಬಡಿಗೇರ, ಕಾರ್ತಿಕ ದೊಡ್ಡಮನಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net