ವಿವೇಕಾನಂದರ ಆದರ್ಶ ಅಳವಡಿಸಿಕೊಳ್ಳಲಿ

SANSHI KANUNU ARIVU
Published on

ಸಂಶಿ: ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾಗಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯುವ ಜನತೆ ದೇಶದ ಅತ್ಯಮೂಲ್ಯ ಕೊಡುಗೆಯಾಗಿದ್ದಾರೆ ಎಂದು ಕುಂದಗೋಳದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅಬ್ದುಲ್ ಖಾದರ್ ಹೇಳಿದರು.

ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ ಅಂಗವಾಗಿ ತಾಲೂಕು ಕಾನೂನು ಸೇವಾ ಸಮಿತಿ ಕುಂದಗೋಳ ಹಾಗೂ ಸಂಶಿ ಕೆಎಲ್​ಇ ಸಂಸ್ಥೆಯ ಮಹಾವಿದ್ಯಾಲಯ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕುಂದಗೋಳದ ಸಿವಿಲ್ ನ್ಯಾಯಾಧೀಶರಾದ ಗಾಯತ್ರಿ, ವಕೀಲರ ಸಂಘದ ಅಧ್ಯಕ್ಷ ಬಿ.ಪಿ. ಪಾಟೀಲ ಅವರನ್ನು ಸನ್ಮಾನಿಸಲಾಯಿತು.

ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಎ.ಬಿ. ಉಪ್ಪಿನ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಹಿರಿಯ ವಕೀಲರಾದ ಸಿ.ಎಂ. ಕಾಳೆ, ಎ.ಆರ್. ಕುಲಕರ್ಣಿ, ಜಿ.ಬಿ. ಸೊರಟೂರ, ಸಹಾಯಕ ಸರ್ಕಾರಿ ಅಭಿಯೋಜಕಿ ಗೀತಾ ಜಿ. ಮತ್ತು ವಕೀಲರ ಸಂಘದ ಸದಸ್ಯರು ಉಪಸ್ಥಿತರಿದ್ದರು. ವಕೀಲ ಎ.ಎಚ್. ಅಗಡಿ ಉಪನ್ಯಾಸ ನೀಡಿದರು. ಪ್ರಾಚಾರ್ಯ ಪೊ›. ರಮೇಶ ಅತ್ತಿಗೇರಿ ಹಾಗೂ ಎಸ್.ಸಿ. ಅಂಗಡಿ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net