

ಶಿರಸಿ: ನಮ್ಮ ಮಕ್ಕಳಿಗೆ ರಾಷ್ಟ್ರೀಯತೆ, ಸನಾತನ ಸಂಸ್ಕೃತಿ ಪರಿಚಯ ಮಾಡಿಸಿ ಬೆಳೆಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ತಾಲೂಕಿನ ಕಾನಗೋಡದಲ್ಲಿ ಯುಗಾದಿ ಉತ್ಸವ ಸಮಿತಿಯಿಂದ ಹಿರಿಯ ಪ್ರಾಥಮಿಕ ಶಾಲಾ ಆವಾರದಲ್ಲಿ ಭಾನುವಾರ ಹಮ್ಮಿಕೊಂಡ ಸನ್ಮಾನ, ಸಾಂಸ್ಕೃತಿಕ ಹಬ್ಬದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾಮಾಜಿಕ ಕಾರ್ಯಕರ್ತ ಉಪೇಂದ್ರ ಪೈ, ನಗರಕ್ಕಿಂತ ಗ್ರಾಮೀಣ ಭಾಗದಲ್ಲಿ ನೆಮ್ಮದಿ ಹೆಚ್ಚು. ನಮ್ಮ ಮಕ್ಕಳು ದಾರಿ ತಪ್ಪದಂತೆ ಪಾಲಕರೇ ಎಚ್ಚರಿಕೆಯಿಂದ ನಡೆಸಿಕೊಳ್ಳಬೇಕು ಎಂದರು.
ಸಂಸದರು, ಪತ್ರಕರ್ತ ರಾಘವೇಂದ್ರ ಬೆಟ್ಟಕೊಪ್ಪ ಅವರನ್ನು ಗೌರವಿಸಲಾಯಿತು. ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಸುರೇಶ ನಾಯ್ಕ ವಹಿಸಿದ್ದರು. ಉಪಾಧ್ಯಕ್ಷ ಅಶೋಕ ಹೆಗಡೆ, ಡಿ.ವಿ. ಹೆಗಡೆ ಕಾನಗೋಡ, ರಾಮಚಂದ್ರ ಪಟಗಾರ, ಪ್ರಧಾನ ಕಾರ್ಯದರ್ಶಿ ರವಿ ಗಾಂವಕರ, ಸಹ ಕಾರ್ಯದರ್ಶಿ ಸತೀಶ ದೇಶಭಂಡಾರಿ, ಕೋಶಾಧ್ಯಕ್ಷ ಶಿವಾನಂದ ನಾಯ್ಕ ಇತರರು ಇದ್ದರು.
ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಯಡಹಳ್ಳಿ ಸೊಸೈಟಿ ಅಧ್ಯಕ್ಷ ಜಿ.ಆರ್. ಹೆಗಡೆ ಬೆಳ್ಳೇಕೇರಿ ಚಾಲನೆ ನೀಡಿದರು. ಗ್ರಾಪಂ ಅಧ್ಯಕ್ಷ ಪ್ರಕಾಶ ನಾಯ್ಕ, ಚಿಂತಕ ರಮೇಶ ಹೆಗಡೆ ಹಳೆಕಾನಗೋಡ, ಶಾಲಾ ಮುಖ್ಯಾಧ್ಯಾಪಕ ರವೀಂದ್ರ, ಗ್ರಾಪಂ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಶೆಟ್ಟಿ, ಎಸ್ಡಿಎಂಸಿ ಅಧ್ಯಕ್ಷ ಕೃಷ್ಣ ನಾಯ್ಕ ಇತರರು ಇದ್ದರು. ಗಿರಿಧರ ಕಬ್ನಳ್ಳಿ, ಪ್ರತಿಮಾ ಮಾಳೆನಳ್ಳಿ ನಿರ್ವಹಿಸಿದರು. ಚಿಂತನಾ ಮಾಳಕೋಡ ತಂಡದಿಂದ ಯಕ್ಷನಾಟ್ಯ ವೈಭವ ನಡೆಯಿತು.