

ಸವದತ್ತಿ: ಮುಂಗಾರು ಮಳೆ ಆರಂಭವಾದ ಹಿನ್ನೆಲೆಯಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದ್ದು, ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ವಿಶ್ವಾಸ ವೆದ್ಯ ಹೇಳಿದರು.
ಇಲ್ಲಿನ ಕರಿಕಟ್ಟಿ ರಸ್ತೆಯಲ್ಲಿರುವ ಕೃಷಿ ಸಂಪರ್ಕ ಕೇಂದ್ರದಲ್ಲಿ ಬುಧವಾರ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷಿ ಇಲಾಖೆ ಅಧಿಕಾರಿಗಳು ರೆತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ ಹಾಗೂ ಗೊಬ್ಬರ ವಿತರಿಸಬೇಕು. ಜತೆಗೆ ರಸಗೊಬ್ಬರದ ಕೊರತೆ ಆಗದಂತೆ ಕ್ರಮವಹಿಸಬೇಕು. ರೆತರು ಸಂಪರ್ಕ ಕೇಂದ್ರಗಳಲ್ಲಿ ಬೀಜ, ಗೊಬ್ಬರ ಖರೀದಿಸಿ ಭೂಮಿಯ ತೇವಾಂಶದ ಹದ ನೋಡಿಕೊಂಡು ಬಿತ್ತನೆಗೆ ಮುಂದಾಗಬೇಕು ಎಂದು ತಿಳಿಸಿದರು.
ಬೆಳಗಾವಿ ಸಹಾಯಕ ಉಪಕೃಷಿ ನಿರ್ದೇಶಕ ಸಲೀಂ ಸಂಗತ್ರಾಸ್ ಮಾತನಾಡಿ, ಸವದತ್ತಿ ತಾಲೂಕಿನಲ್ಲಿ 13 ಹಾಗೂ ಯರಗಟ್ಟಿ ತಾಲೂಕಿನಲ್ಲಿ 2 ಬಿತ್ತನೆ ಬೀಜ ವಿತರಣಾ ಕೇಂದ್ರಗಳ ಮೂಲಕ ಹೆಸರು, ಉದ್ದ, ಮೆಕ್ಕೆಜೋಳ, ಸೂರ್ಯಕಾಂತಿ, ಸೋಯಾ ಅವರೆ, ಭತ್ತ, ಸಜ್ಜೆ, ತೊಗರಿ ಸೇರಿ ಇತರ ಬೀಜಗಳನ್ನು ಸರ್ಕಾರದ ಸಹಾಯ ಧನದಲ್ಲಿ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಹಾಯಕ ಕೃಷಿ ನಿರ್ದೇಶಕ ಎಸ್.ವಿ. ಪಾಟೀಲ ಮಾತನಾಡಿ, ತಾಲೂಕಿನಲ್ಲಿ ರೆತರು ಬಿತ್ತನೆಗೆ ಸಜ್ಜಾಗುತ್ತಿರುವುದು ಹಾಗೂ ಮುಂಗಾರು ಹಂಗಾಮು ಆಶಾದಾಯಕವಾಗಿರುವುದು ಒಳ್ಳೆಯದು. ರೆತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿಎಪಿ ರಸಗೊಬ್ಬರ ರೂಢಿಗತವಾಗಿ ಬಳಸುತ್ತಿದ್ದಾರೆ. ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರ ಇರುತ್ತದೆ. ಹಾಗಾಗಿ ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಬೇಕು ಎಂದು ಸಲಹೆ ನೀಡಿದರು.
ಮುಖಂಡರಾದ ಚಂದ್ರು ಶಾಮರಾಯನವರ, ಎಪಿಎಂಸಿ ಅಧ್ಯ ಚಂದ್ರು ಜಂಬ್ರಿ, ಕಷಿಕ ಸಮಾಜದ ತಾಲೂಕಾಧ್ಯ ಉಮೇಶ ಬೋಳೆತ್ತಿನ, ಶಂಕರ ಇಟ್ನಾಳ, ಶಿವಪ್ರಕಾಶ ಯಲಿಗಾರ, ರಾಜೇಶ ಅಂಗಡಿ, ಮೋದಿನ್ ಅತ್ತಾರ ಇತರರಿದ್ದರು.