

ಚಿಕ್ಕೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಶ್ಲಾಘನೀಯ ಎಂದು ಸದಲಗಾ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ರಸೀದಾ ನದಾಫ್ ಅಭಿಪ್ರಾಯಪಟ್ಟರು.
ತಾಲೂಕಿನ ಸದಲಗಾ ಗ್ರಾಮದಲ್ಲಿ ಈಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಹಮ್ಮಿಕೊಂಡಿದ್ದ ಕವನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಸಂಘಗಳು ಉತ್ತಮ ಸಮಾಜಮುಖಿ ಕಾರ್ಯ ಮಾಡುತ್ತಿವೆ. ಮಹಿಳೆಯರು ಸಂಘದ ಯೋಜನೆಗಳ ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದರು.
ಕೇಂದ್ರದ ಅಧ್ಯಕ್ಷೆ ಮಾಸಾಬಿ ಬಿ., ಯೋಜನಾಧಿಕಾರಿ ಹರೀಶ ಪಾವಸ್ಕರ್, ವಲಯ ಮೇಲ್ವಿಚಾರಣಾಧಿಕಾರಿ ಸೋಮೇಶ್ವರ ಕಮ್ಮಾರ, ಸಮನ್ವಯಾಧಿಕಾರಿ ಜ್ಯೋತಿ ಕಿನಾಳ ಇತರರಿದ್ದರು.