ಮಹಿಳೆಯರು ಗುರುತರ ಜವಾಬ್ದಾರಿ ನಿರ್ವಹಿಸುವಂತಾಗಲಿ

ನಾಪೋಕ್ಲುವಿನ ಮಹಿಳಾ ಸಮಾಜದದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸದಸ್ಯರು ಹಾಜರಿದ್ದರು.
ನಾಪೋಕ್ಲುವಿನ ಮಹಿಳಾ ಸಮಾಜದದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸದಸ್ಯರು ಹಾಜರಿದ್ದರು.
Published on

ನಾಪೋಕ್ಲು: ಮನೆ ಹಾಗೂ ಸಂಸಾರವನ್ನು ನಿಭಾಯಿಸುವುದರೊಂದಿಗೆ ಸಮಾಜದಲ್ಲೂ ಗುರುತರವಾದ ಜವಾಬ್ದಾರಿಯನ್ನು ಮಹಿಳೆಯರು ನಿರ್ವಹಿಸುವಂತಾಗಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಹೇಳಿದರು.

ಇಲ್ಲಿನ ಮಹಿಳಾ ಸಮಾಜದ ಕಟ್ಟಡದಲ್ಲಿ ಮಂಗಳವಾರ ಆಯೋಜಿಸಿದ್ದ ನಂ.393ನೇ ನಾಪೋಕ್ಲು ಸಹಕಾರ ಮಹಿಳಾ ಸಮಾಜದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್ ಬೇಬ ಮಾತನಾಡಿ, ಹಿರಿಯ ಮಹಿಳೆಯರು ಜ್ಞಾನ ವೃದ್ಧಿಸುವ ಕೆಲಸ ಮಾಡುತ್ತಿದ್ದು, ಮಹಿಳಾ ಸಮಾಜದ ಬೇಡಿಕೆಯನ್ನು ಪಂಚಾಯಿತಿಯಿಂದ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಮಹಿಳಾ ಸಮಾಜದ ಅಧ್ಯಕ್ಷೆ ಕುಂಚೆಟ್ಟಿರ ರೇಷ್ಮಾ ಉತ್ತಪ್ಪ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಎಲ್ಲರ ಸಲಹೆ, ಸಹಕಾರ ಅವಶ್ಯ. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.

ಮಹಿಳಾ ಸಮಾಜದ ಉಪಾಧ್ಯಕ್ಷೆ ಬೊಪ್ಪಂಡ ಶೈಲಾ ಬೋಪಯ್ಯ, ನಿರ್ದೇಶಕಕಿ ಬಿದ್ದಾಟಂಡ ಗಿರಿಜಾ ಬೋಪಣ್ಣ, ಮುಂಡಂಡ ಸುಶೀಲಾ ಸೋಮಣ್ಣ, ಕೇಟೋಳಿರ ಶಾರದಾ ಪಳಂಗಪ್ಪ, ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಕುಂಡ್ಯೋಳಂಡ ಕವಿತಾ ಮುತ್ತಣ್ಣ, ಅಪ್ಪಾರಂಡ ಡೇಸಿ ತಿಮ್ಮಯ್ಯ, ಪುಲ್ಲೆರ ಪದ್ಮಿನಿ ಭೀಮಯ್ಯ, ಕಾರ್ಯದರ್ಶಿ ರಾಜೇಶ್ವರಿ ಲೋಕೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net