ಮಹಿಳೆಯರು ಸ್ವ ಉದ್ಯಮಿಯಾಗಿ ಹೊರಹೊಮ್ಮಲಿ

Published on

ಸಕಲೇಶಪುರ: ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಮೂಲಕ ಮಹಿಳೆಯರು ಸ್ವ ಉದ್ಯಮಿಗಳಾಗಿ ಹೊರಹೊಮ್ಮಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೈಗಾರಿಕೆ ಇಲಾಖೆ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದರು. ಸರ್ಕಾರ ಮಹಿಳೆಯರನ್ನು ಆರ್ಥಿಕವಾಗಿ ಮೇಲೆತ್ತುವ ಉದ್ದೇಶದಿಂದ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸರ್ಕಾರದ ಇಂತಹ ಯೋಜನೆಗಳ ಸದುಪಯೋಗ ಪಡೆದುಕೊಂಡು ಮಹಿಳೆಯರು ಸಾಕಷ್ಟು ಜನರಿಗೆ ಉದ್ಯೋಗ ನೀಡುವ ಮೂಲಕ ಸ್ವ ಉದ್ಯಮಿಗಳಾಗಿ ಕುಟುಂಬಕ್ಕೆ ಆರ್ಥಿಕವಾಗಿ ಬೆಂಗಾವಲಾಗಬೇಕು. ಆಗ ಮಾತ್ರ ಸರ್ಕಾರದ ಕಾರ್ಯಕ್ರಮಗಳಿಗೆ ಅರ್ಥ ಬರಲಿದೆ ಎಂದರು.

ಸಕಲೇಶಪುರ-ಆಲೂರು-ಕಟ್ಟಾಯ ವಿಧಾನಸಭಾ ಕ್ಷೇತ್ರದ ಸುಮಾರು 40 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಯಮುನಾ, ಡಿವೈಎಸ್‌ಪಿ ಪ್ರಮೋದ್ ಜೈನ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net