ಮಹಿಳೆಯರು ಅವಕಾಶ ಸದ್ಬಳಕೆ ಮಾಡಿಕೊಳ್ಳಲಿ

ಚನ್ನರಾಯಪಟ್ಟಣದ ಆದಿಚುಂಚನಗಿರಿ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ವಿವಿಧ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಅರುಣ್ ಕುಮಾರಿ ಮಾತನಾಡಿದರು.
ಚನ್ನರಾಯಪಟ್ಟಣದ ಆದಿಚುಂಚನಗಿರಿ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ವಿವಿಧ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಅರುಣ್ ಕುಮಾರಿ ಮಾತನಾಡಿದರು.
Published on

ಚನ್ನರಾಯಪಟ್ಟಣ: ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಎ. ಅರುಣಕುಮಾರಿ ಹೇಳಿದರು.

ಪಟ್ಟಣದ ಆದಿಚುಂಚನಗಿರಿ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಸಬಲೀಕರಣ ಘಟಕ, ಐಕ್ಯುಎಸಿ ಸಹಯೋಗದಲ್ಲಿ ಮಂಗಳವಾರ ಕಾಲೇಜಿನಲ್ಲಿ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾನೂನುಬದ್ಧವಾಗಿ ಮಹಿಳೆಯರಿಗೆ ಸಮಾನತೆಯ ಹಕ್ಕು ಇದೆ. ಮಹಿಳೆಯರಿಗೆ ಲಭಿಸುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಪಠ್ಯ ಮತ್ತು ಪತ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಂಡು ಜೀವನದಲ್ಲಿ ಉನ್ನತಿ ಸಾಧಿಸಬೇಕು. ಹೆಣ್ಣು ಮಕ್ಕಳನ್ನು ಗೌರವದಿಂದ ಕಾಣಬೇಕು. ಆಕೆ ಮೇಲಾಗುತ್ತಿರುವ ಶೋಷಣೆಯನ್ನು ತಪ್ಪಿಸಿ ರಕ್ಷಣೆ ನೀಡಿದಾಗ ಪ್ರವರ್ಧನಮಾನಕ್ಕೆ ಬರಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಎನ್. ಕುಮಾರ್ ಮಾತನಾಡಿ, ಅಂತರರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಉದ್ದೇಶ ಸಾಮಾಜಿಕ ಪಿಡುಗು ಎನ್ನಿಸಿಕೊಂಡಿರುವ ಹೆಣ್ಣು ಭ್ರೂಣಹತ್ಯೆ, ಬಾಲ್ಯವಿವಾಹ, ಶೋಷಣೆ, ಲಿಂಗತಾರತಮ್ಯ ಮತ್ತು ಲೈಂಗಿಕ ದೌರ್ಜನ್ಯವನ್ನು ನಿವಾರಿಸುವುದೇ ಆಗಿದೆ. ಹೆಣ್ಣಿಗೆ ಶಿಕ್ಷಣ ನೀಡಿದಾಗ ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ. ಹೆಣ್ಣು ಮಕ್ಕಳು ಶಿಕ್ಷಣ ಪಡೆದು ಸಮಾಜದ ಪರಿವರ್ತನೆಗೆ ಕಾರಣರಾಗಬೇಕು ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ದೀಪಾ ಮಾತನಾಡಿ. ಹೆಣ್ಣು ಮಕ್ಕಳು ಗುರಿ ಸಾಧಿಸಬೇಕಾದರೆ ತಾಳ್ಮೆ, ಪ್ರಾಮಾಣಿಕ ಪ್ರಯತ್ನ ಇರಬೇಕು ಎಂದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎ.ಎಸ್. ಇಂದ್ರಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎ.ಆರ್ ಅನಿತಾ, ವಕೀಲರ ಸಂಘದ ಅಧ್ಯಕ್ಷ ಕೆ.ಎನ್. ಸುಂದರರಾಜ್ ಮಾತನಾಡಿದರು.

ಕಾಲೇಜು ಪ್ರಾಂಶುಪಾಲ ಎಂ.ಕೆ. ಮಂಜುನಾಥ, ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಸಂಯೋಜಕಿ ಎಂ. ನಿರುಪಮಾ, ಗ್ರಂಥಪಾಲಕಿ ಜೆ.ಎನ್. ಕವಿತಾ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅರ್ಚನಾ, ಮೇಲ್ವಿಚಾರಕಿ ಮಮತಾ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಜೆ.ಭಾಸ್ಕರ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net