ಕಾರ್ವಿುಕರು ಸರ್ಕಾರಿ ಸೌಲಭ್ಯ ಪಡೆದುಕೊಳ್ಳಲಿ

SIRSI LAPTOP
Published on

ಶಿರಸಿ: ಕಾರ್ವಿುಕರಿಗೆ ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ಒದಗಿಸುತ್ತಿದೆ. ಇದರ ಉಪಯೋಗವನ್ನು ಕಾರ್ವಿುಕರು ಪಡೆದುಕೊಳ್ಳಬೇಕು. ಕಾರ್ವಿುಕರನ್ನು ಮೂಂಚೂಣಿಗೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಕಾರ್ವಿುಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ ವತಿಯಿಂದ ಕಾರ್ವಿುಕರಿಗೆ ಕಿಟ್ ವಿತರಿಸಿ ಅವರು ಮಾತನಾಡಿದರು. ಗ್ರಾಮಾಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ಹಾಗೂ ಕಾರ್ವಿುಕರಿಗೆ ಕಿಟ್​ಗಳನ್ನು ವಿತರಿಸುತ್ತಿದ್ದೇವೆ. ಸರ್ಕಾರದ ಕಾರ್ಯಕ್ರಮಗಳು ಪ್ರತಿಯೊಬ್ಬರಿಗೂ ತಲುಪಬೇಕು. ಜನರಿಗೆ ಬೇಕಾದ ಕಾಗದ ಪತ್ರಗಳನ್ನು ತಕ್ಷಣ ಒದಗಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.

ಸಹಾಯಕ ಆಯುಕ್ತೆ ಕಾವ್ಯಾರಾಣಿ ಮಾತನಾಡಿ, ಗ್ರಾಮಾಡಳಿತ ಅಧಿಕಾರಿಗಳಿಗೆ ಲ್ಯಾಪ್ ಟ್ಯಾಪ್​ಗಳನ್ನು ಸರ್ಕಾರದಿಂದ ನೀಡಲಾಗುತ್ತಿದೆ. ಶಿರಸಿ ತಾಲೂಕಿನಲ್ಲಿ 13 ಗ್ರಾಮಾಡಳಿತ ಅಧಿಕಾರಿಗಳನ್ನು ಗುರುತಿಸಿ ವಿತರಿಸಲಾಗುತ್ತಿದೆ ಎಂದರು. ತಾಪಂ ಇಒ ಚನ್ನಬಸಪ್ಪ ಹಾವಣಗಿ, ಗ್ಯಾರಂಟಿ ಯೋಜನೆ ಅಧ್ಯಕ್ಷ ಸತೀಶ ನಾಯ್ಕ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net