

ಅಥಣಿ: ಜೀವನದಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳುವುದು ಅವಶ್ಯ ಎಂದು ಚಿಕ್ಕಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುರೇಶ ಚಿಕ್ಕಟ್ಟಿ ಹೇಳಿದರು.
ಪಟ್ಟಣದ ಶ್ರೀಮತಿ ಕಾಶಿಬಾಯಿ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಂತೆ ಎಂಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಜಂಕ್‌ಪುಡ್ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬಿರುತ್ತಿದೆ. ಆಹಾರ ಪದ್ಧತಿಯಲ್ಲಿ ಬದಲಾವಣೆ ಅವಶ್ಯಕವಾಗಿದೆ.
ಉತ್ತಮ ಆರೋಗ್ಯದಿಂದ ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದರು. ಈ ವೇಳೆ ವಿದ್ಯಾರ್ಥಿಗಳು ತರಕಾರಿ ವ್ಯಾಪಾರ ಮಾಡಿ ಗಮನ ಸೆಳೆದರು. ಸಂಸ್ಥೆಯ ಕಾರ್ಯದರ್ಶಿ ಸದಾಶಿವ ಚಿಕ್ಕಟ್ಟಿ, ಮುಖ್ಯಶಿಕ್ಷಕ ಟಿ.ಎ.ಮೊಗೇರ, ವಿಶ್ವನಾಥ ಸೌದಾಗರ ಇತರರಿದ್ದರು.