

ಚನ್ನಮ್ಮನ ಕಿತ್ತೂರು: ಹಸಿರು ಕ್ರಾಂತಿಯ ಹರಿಕಾರ ಡಾ. ಜಗಜೀವನರಾಂ ಅವರ ಆದರ್ಶವನ್ನು ಎಲ್ಲರೂ ಪಾಲಿಸೋಣ ಎಂದು ತಹಸೀಲ್ದಾರ್ ರವೀಂದ್ರ ಹಾದಿಮನಿ ಹೇಳಿದರು.
ತಾಲೂಕ ಆಡಳಿತ, ತಾಲೂಕು ಪಂಚಾಯಿತಿ, ಎಂ.ಕೆ. ಹುಬ್ಬಳ್ಳಿ ಪಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೈಲಹೊಂಗಲ ಸಂಯುಕ್ತ ಆಶ್ರಯದಲ್ಲಿ ಶನಿವಾರ ತಾಲೂಕ ಆಡಳಿತ ಸೌಧದಲ್ಲಿ ಆಯೋಜಿಸಿದ್ದ ಮಾಜಿ ಉಪ ಪ್ರಧಾನಮಂತ್ರಿ ಡಾ. ಜಗಜೀವನರಾಂ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದಕ್ಕೂ ರಾಣಿ ಚನ್ನಮ್ಮಾಜಿ, ಸಂಗೊಳ್ಳಿ ರಾಯಣ್ಣ, ಅಮಟೂರು ಬಾಳಪ್ಪನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ರಾಜು ಜಾಂಗಟಿ, ಸಂಜು ಲೋಕಾಪುರ, ಭೀಮಪ್ಪ ದುರಗನ್ನವರ, ಮಡಿವಾಳಿ ವಕ್ಕುಂದ, ಎನ್.ಎ್. ಜಕಾತಿ, ಗುರುಸಿದ್ಧ ಜಾಂಗಟಿ, ಅಷ್ಪಾಕ್ ಸುತಗಟ್ಟಿ, ಕಲಾವತಿ ದೇಶನೂರ, ಕೀರಪ್ಪ ಜಾಂಗಟಿ, ವಿವಿಧ ಇಲಾಖೆ ಸಿಬ್ಬಂದಿ ಇದ್ದರು.