ಪೋಲಿಯೊ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ

03-03-Shiva-2
ರಾಯಚೂರಿನ ಕೆಇಬಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಚಿವ ಎನ್.ಎಸ್.ಬೋಸರಾಜು ಮಗುವಿಗೆ ಲಸಿಕೆ ಹಾಕುವ ಮೂಲಕ ಪೋಲಿಯೋ ಲಸಿಕಾ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಿದರು. ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಡಿಎಚ್‌ಒ ಡಾ.ಸುರೇಂದ್ರಬಾಬು, ತಹಸೀಲ್ದಾರ್ ಸುರೇಶ ವರ್ಮಾ, ಕುಟುಂಬ ಕಲ್ಯಾಣಾಕಾರಿ ಡಾ.ಶಿವಕುಮಾರ ಇದ್ದರು.
Published on

ರಾಯಚೂರು: ದೇಶದಲ್ಲಿ ಪ್ರಸ್ತುತ ಪೋಲಿಯೊ ಮೇಲೆ ನಿಯಂತ್ರಣ ಸಾಸಲಾಗಿದ್ದರೂ ಎಲ್ಲರೂ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಸಂಪೂರ್ಣವಾಗಿ ಪೋಲಿಯೊ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ಸ್ಥಳೀಯ ಕೆಇಬಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಪೋಲಿಯೊ ತಡೆಗಟ್ಟುವ ನಿಟ್ಟಿನಲ್ಲಿ ಮಾ.6ರವರೆಗೆ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ನಗರ ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ಪೋಲಿಯೊ ಗಂಭೀರ ಖಾಯಿಲೆಯಾಗಿದ್ದು, ಎಲ್ಲರೂ ತಮ್ಮ ಮಕ್ಕಳಿಗೆ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕಿಸಬೇಕು. ನಿರ್ಲಕ್ಷ ವಹಿಸಿದಲ್ಲಿ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಿಸುವಂತಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಶರಣಬಸವ ಬಲ್ಲಟಗಿ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಡಿಎಚ್‌ಒ ಡಾ.ಸುರೇಂದ್ರಬಾಬು, ತಹಸೀಲ್ದಾರ್ ಸುರೇಶ ವರ್ಮಾ, ಆರ್‌ಸಿಎಚ್ ಅಕಾರಿ ಡಾ.ನಂದಿತಾ, ಕುಟುಂಬ ಕಲ್ಯಾಣಾಕಾರಿ ಡಾ.ಶಿವಕುಮಾರ, ಜಿಲ್ಲಾ ಕ್ಷಯರೋಗ ನಿರ್ಮೂಲನಾಕಾರಿ ಡಾ.ಶಾಕೀರ್ ಮೊಯಿನುದ್ದೀನ್, ಜಿಲ್ಲಾ ಮಾನವ ಹಕ್ಕುಗಳ ಸಂಘಟನೆ ಅಧ್ಯಕ್ಷ ಚಂದ್ರಕಾಂತ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net