ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಲಿ

14SHIRASANGI1
Published on

ಶಿರಸಂಗಿ: ಪ್ರತಿಯೊಬ್ಬರು ಸಸಿ ನೆಟ್ಟು ಪರಿಸರ ಸಂರಕ್ಷಣೆ ಮಾಡಲು ಕೈಜೋಡಿಸಬೇಕು. ಇದರಿಂದ ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಪಿಕೆಪಿಎಸ್ ಉಪಾಧ್ಯಕ್ಷ ಶಿವಾನಂದ ಹರ್ಲಾಪುರ ಹೇಳಿದರು.

ಗ್ರಾಮದ ಪಿಎಂಶ್ರೀ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಿಣಾಭಿವೃದ್ಧಿ ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರೀ ಸಿದ್ದೇಶ್ವರ ಹಸಿರು ವನ ನಿರ್ಮಾಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಆಧುನಿಕರಣದ ಹೆಸರಲ್ಲಿ ಪರಿಸರ ನಾಶವಾಗುತ್ತಿರುವುದು ಖೇದಕರ ಸಂಗತಿ. ಅಭಿವೃದ್ಧಿಯೂ ಮುಖ್ಯವಾಗಿದೆ. ಆದರೆ, ಪರಿಸರ ರಕ್ಷಣೆಗೂ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ವಲಯ ಮೇಲ್ವಿಚಾರಕಿ ಪದ್ಮಾವತಿ, ಸೇವಾ ಪ್ರತಿನಿಧಿ ಸಕ್ಕೂಬಾಯಿ ಖಾನನ್ನವರ, ಗ್ರಾಪಂ ಸದಸ್ಯರಾದ ಗೀತಾ ಕುರ್ತಕೋಟಿ, ಗೌರಮ್ಮ ಮಾಸ್ತಿ, ಶಿವಾನಂದ ತಿಮ್ಮಾಪುರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net