ನಶೆಮುಕ್ತ ಕರ್ನಾಟಕ ನಿರ್ಮಾಣವಾಗಲಿ

HNP- Nashe 29
ದೊಡ್ಡಕಾಡನೂರು ಗ್ರಾಮದಲ್ಲಿ ಮಂಗಳವಾರ ನಶಾ ಮುಕ್ತ ಭಾರತ ಅಭಿಯಾನ ಯೋಜನೆಯಡಿ ಆಯೋಜಿಸಿದ್ದ ಜಾಗೃತಿ ಜಾಥಾ ಹಾಗೂ ಪ್ರತಿಜ್ಞಾವಿಧಿ ಬೋಧನೆ ಕಾರ್ಯಕ್ರಮದಲ್ಲಿ ವಿವಿಧೊದ್ದೇಶ ಪುನರ್ವಸತಿ ಕೇಂದ್ರದ ಕಾರ್ಯಕರ್ತ ಕೆ.ಬಿ.ಹರೀಶ್ ಮಾತನಾಡಿದರು.
Published on

ಹೊಳೆನರಸೀಪುರ: ನಶೆಮುಕ್ತ ಕರ್ನಾಟಕ ನಿರ್ಮಾಣ ಮಾಡುವ ಮೂಲಕ ದೇಶವನ್ನು ಸದೃಢಗೊಳಿಸಲು ಸಹಕರಿಸೋಣ ಎಂದು ತಾಲೂಕು ವಿವಿಧೊದ್ದೇಶ ಪುನರ್ವಸತಿ ಕೇಂದ್ರದ ಕಾರ್ಯಕರ್ತ ಕೆ.ಬಿ.ಹರೀಶ್ ಹೇಳಿದರು.

ತಾಲೂಕಿನ ದೊಡ್ಡಕಾಡನೂರು ಗ್ರಾಮದಲ್ಲಿ ಮಂಗಳವಾರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆ, ವಿಕಲಚೇತನ- ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಮದ್ಯವ್ಯಸನ ಮುಕ್ತಿ ಕೇಂದ್ರ ಹಾಸನ ಹಾಗೂ ಹೊಳೆನರಸೀಪುರ ತಾಲೂಕು ವಿವಿಧೋದ್ದೇಶ ಪುನರ್ವಸತಿ ಕೇಂದ್ರ ಮತ್ತು ದೊಡ್ಡಕಾಡನೂರು ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳು ಸಂಯುಕ್ತ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನ ಯೋಜನೆಯಡಿ ಆಯೋಜಿಸಿದ್ದ ಜಾಗೃತಿ ಜಾಥಾ ಹಾಗೂ ಪ್ರತಿಜ್ಞಾವಿಧಿ ಬೋಧನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜದ ಸ್ವಸ್ಥವನ್ನು ಕೆಡಿಸುವ ಮಾದಕ ವ್ಯಸನದಿಂದ ದೂರ ಇರಬೇಕು. ವಿದ್ಯಾಭ್ಯಾಸಕ್ಕೆ ಮಾರಕವಾಗುವ ಮಾದಕ ವ್ಯಸನಕ್ಕೆ ಬಲಿಯಾಗಬಾರದು. ಮಾದಕ ವ್ಯಸನವನ್ನು ತ್ಯಜಿಸಿ, ಕುಟುಂಬ, ಸಮುದಾಯ, ಸಮಾಜ ಹಾಗೂ ದೇಶದ ಸ್ವಾಸ್ಥೃವನ್ನು ಕಾಪಾಡಬೇಕು. ನಮ್ಮ ಭವಿಷ್ಯ ಹಾಗೂ ದೇಶದ ಅಭಿವೃದ್ಧಿಗೆ ತಡೆಯಾಗಿರುವ ಮಾದಕ ವ್ಯಸನದಿಂದ ಮುಕ್ತರಾಗೋಣ ಎಂದು ತಿಳಿಸಿದರು. ನಂತರ ಪ್ರತಿಜ್ಞಾವಿಧಿ ಬೊಧಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಚೌಡಯ್ಯ ಕಟ್ನವಾಡಿ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಯಾವುದೇ ಮಾದಕ ವಸ್ತುಗಳನ್ನು ಸೇವನೆ ಮಾಡಬಾರದು. ಇದರಿಂದ ಅನೇಕ ರೋಗಗಳು ಬರುತ್ತವೆ. ಮಾದಕ ವಸ್ತುಗಳನ್ನು ಸೇವನೆ ಮಾಡುವವರು ನಿಮ್ಮ ಮನೆಗಳಲ್ಲಿ ಇದ್ದರೆ ಅವರಿಗೆ ತಿಳಿವಳಿಕೆ ನೀಡಿ, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಎಂದು ತಿಳಿಸಿದರು.

ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಪಿ.ಮಾತನಾಡಿದರು. ನಶೆಮುಕ್ತ ಸಮಾಜ ನಿರ್ಮಾಣದ ಬಗ್ಗೆ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಜಾಥಾದಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಎಚ್.ಎಚ್.ಭಾಗ್ಯಾ, ಎಚ್.ಆರ್.ರಾಜಮ್ಮ, ಕೆ.ಆರ್.ಜ್ಯೊತಿ, ಪಿ.ಆರ್. ಮಂಜುಳಾ, ಬಿ.ಎನ್.ಸುಶೀಲಾ, ಎಂ.ಎಸ್ ಮೋಹನ್, ಕೆ.ಕೆ.ಸುದೀಪ್ ಮತ್ತು ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಸಿಬ್ಬಂದಿ, ಜೆಎಸ್‌ಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಪ್ರೌಢಶಾಲೆಯ ಮುಖ್ಯಶಿಕ್ಷಕರು, ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net