ಎಲ್ಲ ಹಬ್ಬಗಳನ್ನು ಸಂಭ್ರಮದಿಂದ ಆಚರಿಸೋಣ

Let's celebrate all festivals with joy.
ಹುನಗುಂದ ಪಟ್ಟಣದ ಈದ್ಗಾ ಮೈದಾನದಲ್ಲಿ ರಂಜಾನ್ ಅಂಗವಾಗಿ ಹಮ್ಮಿಕೊಂಡ ಸಾಮೂಹಿಕ ಪ್ರಾರ್ಥನೆ ವೇಳೆ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿದರು. ಮುಸ್ಲಿಂ ಯೂನಿಟಿ ಅಧ್ಯಕ್ಷ ಜಬ್ಬಾರ ಕಲಬುರ್ಗಿ, ವಕ್ಫ್ ಬೋರ್ಡ್ ಜಿಲ್ಲಾಧ್ಯಕ್ಷ ಮೆಹಬೂಬ ಸರಕಾವಸ ಇದ್ದರು.
Published on

ಹುನಗುಂದ: ರಂಜಾನ್ ಹಬ್ಬವು ಮುಸ್ಲಿಮರ ಪವಿತ್ರ ಹಬ್ಬವಾಗಿದ್ದು, ಭಾರತೀಯ ಪ್ರಜೆಗಳಾದ ನಾವೆಲ್ಲರೂ ಸೇರಿ ಎಲ್ಲ ಹಬ್ಬಗಳನ್ನು ಸಂಭ್ರಮದಿಂದ ಆಚರಿಸಬೇಕು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಪಟ್ಟಣದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ನಿಮಿತ್ತ ಸೋಮವಾರ ಆಯೋಜಿಸಿದ್ದ ಸಾಮೂಹಿಕ ಪ್ರಾರ್ಥನೆ ವೇಳೆ ಮಾತನಾಡಿದ ಅವರು, ಒಂದು ತಿಂಗಳು ಉಪವಾಸ ವ್ರತ ನೆರವೇರಿಸಿದ್ದೀರಿ. ಅಲ್ಲಾಹು ನಿಮಗೆ ಸುಖ, ಶಾಂತಿ ನೀಡಲಿ. ಹಿಂದು-ಮುಸ್ಲಿಮರು ಸಹೋದರರಂತೆ ಜೀವನ ನಡೆಸಬೇಕು ಎಂದರು.

ಪಟ್ಟಣದ ಅಂಜುಮನ್ ಇಸ್ಲಾಂ ಕಮಿಟಿ ಪ್ರಗತಿಯತ್ತ ಸಾಗಲು, ಶಾದಿಮಹಲ್ ಅಭಿವೃದ್ಧ್ದಿ ಪಡಿಸಲು 20 ಲಕ್ಷ ರೂ. ಶಾಸಕರ ಪ್ರದೇಶ ಅಭಿವೃದ್ಧಿ ನಿಧಿಯಿಂದ ನೀಡುತ್ತೇನೆ. ಮುಂದಿನ ದಿನಗಳಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಹುನಗುಂದ ಪಟ್ಟಣದಲ್ಲಿ ಶಾದಿಮಹಲ್ ನಿರ್ಮಾಣ ಮಾಡಲಾಗುವುದು. ತಾಲೂಕಿನ ಎಲ್ಲ ದರ್ಗಾಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.

ಮುಸ್ಲಿಂ ಯೂನಿಟಿ ಅಧ್ಯಕ್ಷ ಜಬ್ಬಾರ ಕಲಬುರ್ಗಿ, ವಕ್ಫ್ ಬೋರ್ಡ್ ಜಿಲ್ಲಾಧ್ಯಕ್ಷ ಮೆಹಬೂಬ ಸರಕಾವಸ, ಅಂಜುಮನ್ ಇಸ್ಲಾಂ ಕಮಿಟಿ ಅಧ್ಯಕ್ಷ ಪರವೇಜ ಖಾಜಿ, ಪುರಸಭೆ ಸದಸ್ಯ ಮೆಹಬೂಬ ಸರಕಾವಸ, ಮೆಹಬೂಬ ಖಾಜಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net