ಮಹಾತ್ಮರ ಜಯಂತಿ ಅರ್ಥಪೂರ್ಣ-ಅದ್ಧೂರಿಯಾಗಿ ಆಚರಿಸೋಣ; ತಹಸೀಲ್ದಾರ್ ಸುರೇಶ ಚಾವಲರ

TIKOTA TAHASILDAR MEETING
ತಿಕೋಟಾ ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಡಾ. ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆಯ ಪೂರ್ವಭಾವಿ ಸಭೆ ನಡೆಯಿತು. ತಹಸೀಲ್ದಾರ್ ಸುರೇಶ ಚಾವಲರ, ಇಒ ಬಿ.ಆರ್. ಬಿರಾದಾರ, ರಘು ನಡುವಿನಮನಿ ಮತ್ತಿತರರಿದ್ದಾರೆ.
Published on

ವಿಜಯಪುರ: ತಿಕೋಟಾ ತಾಲೂಕು ಆಡಳಿತದಿಂದ ಏ. 5ರಂದು ಡಾ. ಬಾಬು ಜಗಜೀವನರಾಂ ಹಾಗೂ ಏ.14 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು.

ಸ್ಥಳೀಯ ತಹಸೀಲ್ದಾರ್ ಕಚೇರಿಯಲ್ಲಿ ತಹಸೀಲ್ದಾರ್ ಸುರೇಶ ಚಾವಲರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಈ ಮಹನೀಯರ ಜಯಂತಿಗೆ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.

ತಾಪಂ ಇಒ ಬಿ.ಆರ್. ಬಿರಾದಾರ, ಪಟ್ಟಣ ಪಂಚಾಯಿತಿ ಅಧಿಕಾರಿ ರಘು ನಡುವಿನಮನಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಜೆ ಇಂಡಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net