ದೇಶದ ಅಭಿವೃದ್ಧಿಗೆ ಕೊಡುಗೆ ನೀಡಲಿ

BANAKAR
Published on

ಹಿರೇಕೆರೂರ: ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಬಹುಮುಖ್ಯವಾಗಿದೆ. ಪ್ರತಿಯೊಬ್ಬರೂ ಶಿಕ್ಷಣವಂತರಾಗಿ, ಮಾದರಿ ವ್ಯಕ್ತಿತ್ವ ರೂಪಿಸಿಕೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ತಾಲೂಕಿನ ನೂಲಗೇರಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಶಾಲಾ ಕೊಠಡಿಗಳನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ ಹತ್ತರು ಯೋಜನೆಗಳನ್ನು ಜಾರಿಗೊಳಿಸಿವೆ. ವಿದ್ಯಾರ್ಥಿಗಳು ಯೋಜನೆಗಳ ಪ್ರಯೋಜನ ಪಡೆದುಕೊಂಡು ಶಿಕ್ಷಣವಂತರಾಗಿ ಕಲಿತ ಶಾಲೆ, ಪಾಲಕರು ಮತ್ತು ಶಿಕ್ಷಕರಿಗೆ ಗೌರವ ತರುವಂತಹ ಸಾಧನೆ ಮಾಡಬೇಕು. ಪಠ್ಯದೊಂದಿಗೆ ಸಹಪಠ್ಯ ಚಟುವಟಕೆಗಳಲ್ಲಿ ಪಾಲ್ಗೊಂಡು ಸರ್ವತೋಮುಖ ಬೆಳವಣಿಗೆ ಹೊಂದಬೇಕು. ಶಿಕ್ಷಣದೊಂದಿಗೆ ಸಂಸ್ಕಾರ ಗುಣಗಳನ್ನು ಬೆಳೆಸಿಕೊಂಡು ಸಮಾಜದಲ್ಲಿ ಮಾದರಿಯಾಗುವಂತಹ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.

ಗ್ರಾಪಂ ಅಧ್ಯಕ್ಷೆ ರೇಣುಕಾ ಮಹಾದೇವಪ್ಪ ವೀರಾಪುರ, ಡಿಡಿಪಿಐ ಸುರೇಶ ಹುಗ್ಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶ್ರೀಧರ್, ಎಸ್‌ಡಿಎಂಸಿ ಉಪಾಧ್ಯಕ್ಷ ಗಣೇಶ ತಾವರಗಿ, ಗ್ರಾಪಂ ಸದಸ್ಯರಾದ ಉಮಾ ಚಕ್ರಸಾಲಿ, ಮನೋಹರ ಕಮ್ಮಾರ, ವಿನಯ ದಳವಾಯಿ, ಕ್ಷೇತ್ರ ಸಮನ್ವಯಾಧಿಕಾರಿ ಎನ್. ಸುರೇಶಕುಮಾರ, ಪೋಷಣ್ ಅಭಿಯಾನದ ಸಹಾಯಕ ನಿರ್ದೇಶಕ ಎಚ್.ಎಚ್. ಜಾಡರ, ಪ್ರಾಚಾರ್ಯ ಕೆ.ಸಿ. ಉಕ್ಕುಂದ, ಉಪ ಪ್ರಾಚಾರ್ಯ ಸಿ.ಎನ್. ಲಮಾಣಿ, ಮುಖ್ಯಶಿಕ್ಷಕ ಎಂ.ಡಿ. ಕುರುಬರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net