ಶಿಕ್ಷಣದ ಜತೆಗೆ ಸಂಸ್ಕಾರ ಬೆಳೆಸೋಣ

20mnd2-=
Published on

ಮುಂಡಗೋಡ: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಉತ್ತಮ ಸಮಾಜದ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಮಾಜಿ ಶಾಸಕ ವಿ.ಎಸ್. ಪಾಟೀಲ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಹಾಗೂ ತಾಲೂಕು ಘಟಕ ವತಿಯಿಂದ ಪಟ್ಟಣದ ನಿವೃತ್ತ ನೌಕರರ ಭವನದಲ್ಲಿ 2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಪೂರ್ಣಾಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಕನ್ನಡ ವಿಷಯದಲ್ಲಿ ಶೇ.100ರಷ್ಟು ಫಲಿತಾಂಶ ನೀಡಿದ ಶಿಕ್ಷಕರಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎನ್. ವಾಸರೆ ಮಾತನಾಡಿ, ಕನ್ನಡ ಭಾಷೆಯನ್ನು ಪ್ರತಿಯೊಬ್ಬರೂ ಉಳಿಸಿ ಬೆಳಸಬೇಕಿದೆ ಎಂದರು.

ಕನ್ನಡ ವಿಷಯದಲ್ಲಿ ಪೂರ್ಣಾಂಕ ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಶೇ. 100 ಫಲಿತಾಂಶ ನೀಡಿದ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ವಸಂತ ಕೊಣಸಾಲಿ, ಡಾ.ಪಿ.ಪಿ. ಛಬ್ಬಿ, ಸುಭಾಸ ಡೋರಿ, ಸಿ.ಎಸ್. ಬಸನಗೌಡ್ರ, ಸಂಗಪ್ಪ ಕೊಳೂರ, ರಾಮಚಂದ್ರ ಕಲಾಲ, ಮಂಜುನಾಥ ಕಲಾಲ, ವಿನಾಯಕ ಶೇಟ್,ಸೋಮಣ್ಣ ಮುಡೇಣ್ಣವರ, ಎಸ್.ಬಿ. ಹೂಗಾರ, ರಮೇಶ ಅಂಬಿಗೇರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net