ಜಾತ್ರೆ ಮೂಲಕ ಪರಂಪರೆ ಬೆಳೆಸೋಣ

Let's cultivate heritage through fairs
Let's cultivate heritage through fairs
Published on

ಕೂಡಲಸಂಗಮ: ಜಾತ್ರೆಯ ಮೂಲಕ ನಮ್ಮ ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಸಂಗಮೇಶ್ವರ ದೇವಾಲಯ ಆವರಣದಲ್ಲಿ ಜಾತ್ರೆ ಅಂಗವಾಗಿ ಬುಧವಾರ ರಾತ್ರಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾತ್ರೆಗಳು ಜನರಿಗೆ ಜಾಗೃತಿ ಮೂಡಿಸುವಂತಿರಬೇಕು. ಈ ವರ್ಷ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಬಸವ ಧರ್ಮ ಪೀಠದ ಮಹಾದೇಶ್ವರ ಸ್ವಾಮೀಜಿ ಸಾನ್ನಿಧ್ಯವಹಿಸಿ ಮಾತನಾಡಿ, ಜಾತ್ರೆಗಳು ಮೌಢ್ಯತೆಯಿಂದ ಕೂಡಿರದೆ, ಜನರಿಗೆ ವೈಚಾರಿಕ ಪ್ರಜ್ಞೆ ಮೂಡಿಸುವಂತಿರಬೇಕು. ಜಾತ್ರೆ ಅಂಗವಾಗಿ ನಡೆಯುವ ನಾಟಕ, ವಚನ ಗಾಯನ ಕಾರ್ಯಕ್ರಮಗಳನ್ನು ಭಕ್ತರು ನೋಡಬೇಕು. ವಚನಗಳಲ್ಲಿ ಬದುಕಿಗೆ ಬೇಕಾದ ಜೀವನ ಮೌಲ್ಯಗಳಿದ್ದು, ಎಲ್ಲರೂ ನಿತ್ಯ ವಚನ ಪಠಣ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದರು.

ಚಳಗೇರಾ ಹಿರೇಮಠದ ವೀರಸಂಗಮೇಶ್ವರ ಸ್ವಾಮೀಜಿ, ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಆಯುಕ್ತ ಮಹಾದೇವ ಮುರಗಿ, ಮುಖಂಡರಾದ ಮಹಾಂತೇಶ ನರಗುಂದ, ಮುತ್ತಣ್ಣ ಕುರಿ, ಶೇಖರಗೌಡ ಗೌಡರ, ಬಸವರಾಜ ಗೌಡರ, ಅಶೋಕ ಗೌಡರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net