ಅಹಿಂಸಾ ತತ್ವ ಪಾಲಿಸೋಣ

IMG-20231002-WA0301
ಫೋಟೋ ಕ್ಯಾಪ್ಶನ್: ಆಲೂರು ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯ 100 ವಿದ್ಯಾರ್ಥಿಗಳಿಗೆ ಲಯನ್ಸ್ ಸೇವಾ ಸಂಸ್ಥೆಯ ಅಧ್ಯಕ್ಷ ಪ್ರವೀಣ್ ಅವರು ಉಚಿತವಾಗಿ ನೋಟ್‌ಬುಕ್ ಹಾಗೂ ಅಗತ್ಯ ಪರಿಕರಗಳನ್ನು ವಿತರಿಸಿದರು. ಟಿ.ಆರ್.ಆನಂದ್, ರಾಮಚಂದ್ರ, ರಘು ಪಾಳ್ಯ, ಜಗದೀಶ್, ನಾಗರಾಜ್, ನೂತನ್, ಪೂರ್ಣಿಮಾ ಇದ್ದರು.
Published on

ಆಲೂರು: ಮಹಾತ್ಮ ಗಾಂಧೀಜಿ ಹಾಕಿಕೊಟ್ಟ ಅಹಿಂಸಾ ಮಾರ್ಗ ಹಾಗೂ ಅವರ ಜೀವನ ಶೈಲಿಯು ಇಂದಿನ ಯುವಕರಿಗೆ ಸ್ಫೂರ್ತಿದಾಯಕವಾಗಿದೆ. ಅವರ ಅಹಿಂಸಾ ತತ್ವಗಳನ್ನು ಪಾಲಿಸೋಣ ಎಂದು ಲಯನ್ಸ್ ಸೇವಾ ಸಂಸ್ಥೆಯ ತಾಲೂಕು ಅಧ್ಯಕ್ಷ ಪ್ರವೀಣ್ ಹೇಳಿದರು.

ತಾಲೂಕಿನ ಹೊನ್ನೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಜನ್ಮದಿನಾಚರಣೆ ಪ್ರಯುಕ್ತ ಶಾಲೆಯ ಸುಮಾರು 100 ವಿದ್ಯಾರ್ಥಿಗಳಿಗೆ ಲಯನ್ಸ್ ಸೇವಾ ಸಂಸ್ಥೆಯ ವತಿಯಿಂದ ಉಚಿತವಾಗಿ ನೋಟ್‌ಬುಕ್ ಸೇರಿದಂತೆ ಅಗತ್ಯ ಪರಿಕರಗಳನ್ನು ವಿತರಿಸಿ ಮಾತನಾಡಿದರು. ಅಹಿಂಸಾತ್ಮಕ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿ ಅವರು ಇತರ ದೇಶಗಳ ಸ್ವಾತಂತ್ರ್ಯ ಹೋರಾಟಕ್ಕೂ ಸ್ಫೂರ್ತಿಯಾಗಿದ್ದರು. ಅದೇ ರೀತಿ ಸರಳ ಮತ್ತು ಸೌಜನ್ಯಯುತ ನಡವಳಿಕೆ ಹೊಂದಿದ್ದ ಲಾಲ್ ಬಹಾದೂರ್ ಶಾಸ್ತ್ರೀ ಅವರು ಕೂಡ ದೇಶದ ಪ್ರಗತಿಗೆ ಶ್ರಮಿಸಿದರು ಎಂದರು.

ಆಲೂರು ಲಯನ್ಸ್ ಸೇವಾ ಸಂಸ್ಥೆ ಕಾರ್ಯದರ್ಶಿ ಟಿ.ಆರ್.ಆನಂದ್, ಖಜಾಂಚಿ ರಾಮಚಂದ್ರ, ಮಾಜಿ ಅಧ್ಯಕ್ಷ ರಘು ಪಾಳ್ಯ, ಪ್ರಾಂತೀಯ ಅಧ್ಯಕ್ಷ ಜಗದೀಶ್, ಸದಸ್ಯರಾದ ನಾಗರಾಜ್, ನೂತನ್, ಮುಖ್ಯಶಿಕ್ಷಕಿ ಪೂರ್ಣಿಮಾ, ಸಹಶಿಕ್ಷಕಿ ವರಲಕ್ಷ್ಮೀ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಲೋಕೇಶ್ ಹಾಗೂ ಮಕ್ಕಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net