ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಲಿ

24 SANDOOR 01
ಸಂಡೂರು ತಾಲೂಕು ತಾಳೂರು ಗ್ರಾಮದಲ್ಲಿ ಹುತಾತ್ಮ ದಿನಾಚರಣೆ ಅಂಗವಾಗಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಸದಸ್ಯತ್ವ ಆಂದೋಲನಕ್ಕೆ ಸಂಘದ ಜಿಲ್ಲಾ ಅಧ್ಯಕ್ಷ ವಿ.ಎಸ್.ಶಿವಶಂಕರ್ ಚಾಲನೆ ನೀಡಿದರು. ತಾಲೂಕು ಅಧ್ಯಕ್ಷ ಪಂಪನಗೌಡ, ರೈತರಾದ ದುರುಗಪ್ಪ, ನಿಂಗಪ್ಪ, ಹುಸೇನ್ ಸಾಬ್, ಮಾರುತಿ, ಮೀಸೆ ಕರಿಯಪ್ಪ, ಮಾಬುಸಾಬ್, ಕಾಲುಸಾಬ್, ಮಲ್ಲಿಕಾರ್ಜುನ ಇತರರಿದ್ದರು.
Published on

ಸಂಡೂರು: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಕನಸು ನನಸಾಗದೆ ಉಳಿದಿದೆ. ಸರ್ಕಾರಗಳು ರೈತರಿಗೆ ಮಾರಕವಾದ ಕೃಷಿ ಕಾನೂನು ಜಾರಿಗೆ ತರುವ ಮೂಲಕ ರೈತ ದ್ರೋಹಿಯಾಗಿ ನಡೆದು ಕೊಳ್ಳುತ್ತಿವೆ ಎಂದು ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ವಿ.ಎಸ್.ಶಿವಶಂಕರ ಹೇಳಿದರು.

ಹುತಾತ್ಮ ದಿನಾಚರಣೆ ಅಂಗವಾಗಿ ತಾಳೂರು ಗ್ರಾಮದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರಿಗೆ ಪಟ್ಟಾ ನೀಡಲು ಒತ್ತಾಯಿಸಿ ಏಕದಿನ ಸದಸ್ಯತ್ವ ಆಂದೋಲನಕ್ಕೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.

ರೈತರ ಬೆಳೆಗೆ ಬೆಂಬಲ ಬೆಲೆ ಸಿಗದೆ ಮೂರು ನಿಮಿಷಕ್ಕೊಬ್ಬ ರೈತ ಆತ್ಮಹತ್ಯೆ ಮಾಡುಕೊಳ್ಳುತ್ತಿದ್ದಾನೆ. ಯುವಜನರಿಗೆ ಉದ್ಯೋಗ ದೊರೆಯದೆ ನಿರುದ್ಯೋಗಿಗಳಾಗುತ್ತಿದ್ದಾರೆ.

ಸತ್ತಲಿನ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಿಲ್ಲ. 1.60 ಲಕ್ಷ ಬ್ಯಾಕ್‌ಲಾಗ್ ಉದ್ಯೋಗ ಖಾಲಿ ಇದ್ದು, ಅವುಗಳನ್ನು ತುಂಬದೆ ಖಾಸಗಿ ಕಂಪನಿಗಳ ಪರವಾಗಿ ಕಾರ್ಮಿಕ ಸಚಿವ ಸಂತೋಷ್‌ಲಾಡ್ ಉದ್ಯೋಗ ಮೇಳ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಸಂಡೂರು ಕೆರೆಗಳಿಗೆ ನೀರು ತುಂಬಿಸಲು ಕಳೆದ ಬಜೆಟ್‌ನಲ್ಲಿ ಹಣ ನೀಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net