

ಕೊಟ್ಟೂರು: ಮಹಾವಿದ್ಯಾಲಯಗಳು ಗುಣಮಟ್ಟದ ಶಿಕ್ಷಣ ನೀಡಿದರೆ, ಇಲ್ಲಿ ವ್ಯಾಸಂಗ ಮಾಡಿದವರು ಉತ್ತಮವಾಗಿ ಬೋಧಿಸಬಲ್ಲರು ಎಂದು ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೋ. ಮುನಿರಾಜು ಹೇಳಿದರು.
ಪಟ್ಟಣದ ತುಂಗಭದ್ರಾ ಶಿಕ್ಷಣ ಸಂಸ್ಥೆಯಲ್ಲಿ ಬಿಇ.ಡಿ ಪ್ರಶಿಕ್ಷಣಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು.
ಹೊಸ ಕೋರ್ಸ್‌ಗಳನ್ನು ಆರಂಭಿಸಿ, ಹೈದರಾಬಾದ್ ಕರ್ನಾಟಕದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದರು.
ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಎಪಿಎಂಸಿ ಉಪಾಧ್ಯಕ್ಷ ಎಂ. ಶಿವಣ್ಣ ಮಾತನಾಡಿ, ವಿದ್ಯಾರ್ಥಿಗಳ ದೃಷ್ಟಿಯಿಂದ ನಮ್ಮ ಕಾಲೇಜಿನಲ್ಲಿ ಮುಂದಿನ ದಿನಗಳಲ್ಲಿ ಹೊಸ ಕೋರ್ಸ್‌ಗಳನ್ನು ಆರಂಭಿಸಲಾಗುವುದು ಎಂದರು.
ವಿಶ್ರಾಂತ ಪ್ರಾಧ್ಯಾಪಕ ಡಾ. ಮಹಾಬಲೇಶ್ವರಪ್ಪ ವಚನ ಸಾಹಿತ್ಯ ಕುರಿತು ಉಪನ್ಯಾಸ ನೀಡಿದರು. ಸಂಸ್ಥೆಯ ಉಪಾಧ್ಯಕ್ಷ ಬಿ.ಎಸ್. ಕೊಟ್ರೇಶಪ್ಪ, ಕಾರ್ಯದರ್ಶಿ ಪಿ.ಎನ್. ಷಾ, ಖಜಾಂಚಿ ಎ. ಮಹಾಂತೇಶಪ್ಪ, ಪ್ರಾಚಾರ್ಯ ಡಾ. ಟಿ. ಶ್ಯಾಮರಾಜ ಇದ್ದರು.