ಮಕ್ಕಳಿಗೆ ಪ್ರಜಾಪ್ರಭುತ್ವ ಪರಿಚಯಿಸುವ ಕಾರ್ಯವಾಗಲಿ

NRD LIONS
Published on

ನರಗುಂದ: ದೇಶದ ಆಡಳಿತ ವ್ಯವಸ್ಥೆ ಮಕ್ಕಳಿಗೆ ತಿಳಿಯಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ಮಾದರಿ ಪರಿಚಯಿಸಬೇಕು. ಶಿಕ್ಷಕರು ಶಾಲಾ ಹಂತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಶಿಕ್ಷಕರು ಬೋಧಿಸಲು ಮುಂದಾಗಬೇಕು ಎಂದು ಲಯನ್ಸ್ ಶಿಕ್ಷಣ ಸಂಸ್ಥೆ ಚೇರ್ಮನ್, ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಪಟ್ಟಣದ ಲಯನ್ಸ್ ಶಿಕ್ಷಣ ಸಂಸ್ಥೆಯ ಲಯನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಂಸ್ಕೃತಿಕ, ವಿಜ್ಞಾನ, ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಹಾಗೂ ಶಾಲಾ ಸಂಸತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ದೇಶ, ರಾಜ್ಯ ಮಾದರಿಯಾದ ಆಡಳಿತ ವ್ಯವಸ್ಥೆ ಹೊಂದಿದೆ. ಅದು ಮಕ್ಕಳಿಗೆ ತಿಳಿಯಬೇಕಿದೆ. ಅವರಿಗೆ ಹಕ್ಕು, ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಬೇಕು. ಇದರಿಂದ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ, ನಾಯಕರಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದರು.

ಲಯನ್ಸ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಜಿ.ಟಿ. ಗುಡಿಸಾಗರ ಮಾತನಾಡಿ, ಮಕ್ಕಳಿಗೆ ನೈತಿಕ ಮೌಲ್ಯಗಳನ್ನು ತಿಳಿಸಿಕೊಡುವ ಕೆಲಸವಾಗಬೇಕು. ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮೀಸಲಾಗಿರದೇ ಸಾಂಸ್ಕೃತಿಕ, ಕ್ರೀಡೆ ಹಾಗೂ ವಿಜ್ಞಾನ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪ್ರತಿಯೊಬ್ಬರು ಮುಂದಾಗಬೇಕು ಎಂದರು.

ಪ್ರಧಾನಮಂತ್ರಿಗಳಾಗಿ ಪ್ರೀತಂ ಪಟ್ಟಣಶೆಟ್ಟಿ, ಕ್ರೀಡಾಮಂತ್ರಿಗಳಾಗಿ ಪವನ ಅರ್ಕಸಾಲಿ, ಸಾಂಸ್ಕೃತಿಕ ಮಂತ್ರಿಗಳಾಗಿ ಈಶ್ವರಪ್ಪ ಹೂಗಾರ, ಶಿಸ್ತುಮಂತ್ರಿ ತೇಜಸ್ವಿನಿ ಕೋಟಿ, ಶಿಕ್ಷಣ ಮಂತ್ರಿಗಳಾಗಿ ಮಣಿಕಂಠ ಆನೇಗುಂದಿ, ಆರೋಗ್ಯ ಮಂತ್ರಿಗಳಾಗಿ ಗೋವಿಂದಸಿಂಗ್ ರಾಥೋಡ, ಪ್ರವಾಸಮಂತ್ರಿಗಳಾಗಿ ಸುಜೀತ ರಾಮದುರ್ಗ, ಹಣಕಾಸು ಮಂತ್ರಿಗಳಾಗಿ ಸುಜಯ ಕುಲಕರ್ಣಿ ಪ್ರಮಾಣ ವಚನ ಸ್ವೀಕರಿಸಿದರು.

ನಿರ್ದೇಶಕ ಜಿ.ಬಿ. ಕುಲಕರ್ಣಿ, ನೂತನ ಸಂಸತ್ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ತನುಜಾ ಪಾಟೀಲ ವಿವಿಧ ಸಮಿತಿಗಳನ್ನುಪರಿಚಯಿಸಿದರು.

ವೇದಿಕೆಯಲ್ಲಿ ಲಯನ್ಸ್ ಶಿಕ್ಷಣ ಸಂಸ್ಥೆ ನಿರ್ದೇಶಕರಾದ ಜಿ.ಬಿ. ಕುಲಕರ್ಣಿ, ಸಿ.ಎಸ್. ಸಾಲೂಟಗಿಮಠ, ವಿಜಯಕುಮಾರ ಬೇಲೇರಿ, ಕೋಆರ್ಡಿನೇಟರ್ ಪ್ರೇರಣಾ ಪಾತ್ರಾ ಇತರರಿದ್ದರು.

ಮುಖ್ಯೋಪಾಧ್ಯಾಯ ಜಿ.ಬಿ. ಹಿರೇಮಠ, ಸೌಜನ್ಯಾ ನೇಸರಗಿ ಹಾಗೂ ತನುಜಾ ಕವಲೂರು ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net