ಪ್ರೌಢಶಾಲೆ ಸದುಪಯೋಗ ಪಡೆಯಲಿ

3RAIBAG1
Published on

ರಾಯಬಾಗ: ಗ್ರಾಮೀಣ ಹೆಣ್ಣು ಮಕ್ಕಳು ಪ್ರೌಢಶಾಲೆ ಶಿಕ್ಷಣದಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಪ್ರಾಥಮಿಕ ಶಾಲೆ ಮೇಲ್ದರ್ಜೆಗೇರಿಸಿ ಪ್ರೌಢಶಾಲೆ ಪ್ರಾರಂಭಿಸುತ್ತಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ತಾಲೂಕಿನ ಮಂಟೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉನ್ನತೀಕರಿಸಿದ ಪ್ರೌಢಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮ ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ

ಶಿಕ್ಷಣ ಪಡೆದು ಶಾಲೆ, ಗ್ರಾಮಕ್ಕೆ ಕೀರ್ತಿ ತರಬೇಕೆಂದರು.

ಶಾಸಕ ಡಿ.ಎಂ.ಐಹೊಳೆ ಮಾತನಾಡಿ, ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗಲು ಸರ್ಕಾರ ಪ್ರಾಥಮಿಕ ಶಾಲೆ ಉನ್ನತೀಕರಿಸಿದೆ. ಶಾಲೆ ಪ್ರಗತಿಗಾಗಿ ಗ್ರಾಮಸ್ಥರು, ಶಿಕ್ಷಕರು, ಪಾಲಕರು ಮತ್ತು ಎಸ್‌ಡಿಎಂಸಿ ಕೈಜೋಡಿಸಬೇಕು. ಶಿಕ್ಷಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣದ ಜತೆಗೆ ಸಂಸ್ಕಾರ ನೀಡಬೇಕೆಂದರು.

ಭೆಂಡವಾಡ ವಿರಕ್ತಮಠದ ಗುರುಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ ಆರ್., ಎಸ್‌ಡಿಎಂಸಿ ಅಧ್ಯಕ್ಷ ರಾಮಚಂದ್ರ ಉಪ್ಪಾರ, ಗ್ರಾಪಂ ಅಧ್ಯಕ್ಷೆ ಶೋಭಾ ಮೇಗಾಡೆ, ಸದಸ್ಯೆ ಮಲ್ಲವ್ವ ಮೇಟಿ, ಪಿಎಸ್‌ಐ ನರಸಿಂಹರಾಜು, ಶಿವು ಪಾಟೀಲ, ಅಪ್ಪಾಸಾಬ ದೇಸಾಯಿ, ಬಸಪ್ಪ ಮುಗಳಿ, ಸದಾಶಿವ ಕೊಳವಿ, ವಿನೋದ ಚವ್ಹಾನ, ಆರ್.ಪಿ.ಲಮಾಣಿ ಹಾಗೂ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಗ್ರಾಮದ ಮುಖಂಡರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net