ಶೇ. 100 ಫಲಿತಾಂಶ ದಾಖಲಿಸುವಂತೆ ಆಗಲಿ

MND
Published on

ಮುಂಡಗೋಡ: ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರು ಮುತುವರ್ಜಿವಹಿಸಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇ. 100ರಷ್ಟು ಆಗುವಂತೆ ಮಾಡಬೇಕು ಎಂದು ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕ ಬಸವರಾಜ ಪಾರಿ ಹೇಳಿದರು.

ಪಟ್ಟಣದ ಪುರಸಭೆ ಭವನದಲ್ಲಿ ಶಿಕ್ಷಣ ಇಲಾಖೆ ಹಾಗೂ ಧಾರವಾಡ ವಿಜೇತ ಶಿಕ್ಷಣ ಸಮಿತಿ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ಸಿದ್ಧತೆ ಹಾಗೂ ವಿಷಯ ಪರಿಣತರ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ವಾರ್ಷಿಕ ಪರೀಕ್ಷೆಗೆ ಇನ್ನೂ 90ದಿನಗಳು ಬಾಕಿ ಉಳಿದಿವೆ. ಶಿಕ್ಷಕರು ಹೆಚ್ಚಿನ ಶ್ರಮ ವಹಿಸಿ ಪ್ರತಿಯೊಂದು ಶಾಲೆಯೂ ಶೇ. 100ರಷ್ಟು ಫಲಿತಾಂಶ ಸಾಧಿಸುವಂತೆ ಮಾಡಬೇಕು ಎಂದರು.

ಧಾರವಾಡ ವಿಜೇತ ಶಿಕ್ಷಣ ಸಂಸ್ಥೆ ನಿರ್ದೇಶಕ ರಮೇಶ್ ಪರಿಟ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಕರು ಮಾಡಿದ ಪಾಠಗಳನ್ನು ಚೆನ್ನಾಗಿ ಓದಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದರೆ ನಾವು ಮಾಡಿದ ಕಾರ್ಯಾಗಾರ ಸಾರ್ಥಕವಾಗುತ್ತದೆ ಎಂದರು.

ಹೆಚ್ಚು ಅಂಕ ಪಡೆದ ಆಯ್ದ ವಿದ್ಯಾರ್ಥಿಗಳಿಗೆ ವಿಜೇತ ಶಿಕ್ಷಣ ಸಂಸ್ಥೆಯಲ್ಲಿ ಉಚಿತವಾಗಿ ಪ್ರವೇಶ ನೀಡುತ್ತೇವೆ ಎಂದರು.

ಪರೀಕ್ಷಾ ಸಿದ್ಧತೆ ಕುರಿತು ಸುರೇಶ್ ಕುಲಕರ್ಣಿ ವಿವರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀರಾಮ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಪ್ರೌಢ ಶಾಲೆಗಳ ಮುಖ್ಯಾಧ್ಯಾಪಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net