ಮನೆಗೊಂದು ಸಸಿ ನೆಟ್ಟು ಪೋಷಿಸಲಿ

14MNL1
Published on

ಮುನವಳ್ಳಿ: ಪ್ರತಿ ವಿದ್ಯಾರ್ಥಿ ಶಾಲೆ ಹಾಗೂ ಮನೆಗೊಂದು ಸಸಿ ನೆಟ್ಟು ಪೋಷಿಸುವ ಕೆಲಸ ಮಾಡಬೇಕು. ಇದರಿಂದ ಪರಿಸರ ವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಜಿಲ್ಲಾ ನಿರ್ದೇಶಕ ಎಚ್.ಆರ್.ಲವಕುಮಾರ ಹೇಳಿದರು.

ಪಟ್ಟಣದ ಎಸ್‌ಪಿಜೆಜಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಉತ್ತಮ ಪರಿಸರದಿಂದ ಆಯೋಗ್ಯಯುತ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಹೀಗಾಗಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಸಲಹೆ ನೀಡಿದರು.

ಮುಖ್ಯಶಿಕ್ಷಕ ಮೋಹನ ಕಾಮಣ್ಣವರ, ಜನ ಜಾಗೃತಿ ವೇದಿಕೆ ಸದಸ್ಯ ಈಶ್ವರ ಕರೀಕಟ್ಟಿ, ಒಕ್ಕೂಟದ ಅಧ್ಯಕ್ಷೆ ದೀಪಾ ಜಂತ್ಲಿ, ವಲಯ ಮೇಲ್ವಿಚಾರಕ ಪ್ರಕಾಶ ಪಾಟೀಲ, ಸೇವಾ ಪ್ರತಿನಿಧಿ ಅನ್ನಪೂರ್ಣ ಕಮಲಾಪುರ, ಶಿಕ್ಷಕರಾದ ಎಸ್.ಬಿ.ಹಿರಲಿಂಗನ್ನವರ, ತರುಣಕುಮಾರ ಮಳಗಲಿ, ಅನಿತಾ ಯಲಿಗಾರ ಹಾಗೂ ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net