ಜನಪದ ಉಳಿಸಿ, ಬೆಳೆಸೋಣ

Published on

ಬಳ್ಳಾರಿ : ಪ್ರತಿಯೊಬ್ಬರೂ ಜಾನಪದ ಸಂಸ್ಕೃತಿಯನ್ನು ಉಳಿಸಿ, ಬೆಳೆಸಲು ಪಣತೊಡಬೇಕು ಎಂದು ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ ಹೇಳಿದರು.

ತಾಲೂಕಿನ ತೆಕ್ಕಲಕೋಟೆ ಶ್ರೀಮತಿ ಹೊನ್ನೂರಮ್ಮ ಸಿದ್ದಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಾನಪದ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ಜಾನಪದ ತಾಯಿ ಇದ್ದಂತೆ ಹಾಗೂ ನಮ್ಮೆಲ್ಲರ ಉಸಿರಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಜಾನಪದ ಸಂಸ್ಕ್ರತಿ ನಮ್ಮ ನೆಲೆಯ ಮಹತ್ವವನ್ನು ತಿಳಿಸುತ್ತದೆ. ಸಮಾಜದಲ್ಲಿ ಜಾನಪದಕ್ಕೆ ಮಹತ್ವದ ಸ್ಥಾನ ಮಾನ ಇದೆ. ಜಾನಪದ ಕಲೆ, ಸಂಸ್ಕೃತಿ, ಸಾಹಿತ್ಯವನ್ನು ಬೆಳಸಬೇಕಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಜಾನಪದ ಮಹತ್ವವನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.

ಕನ್ನಡ ವಿಭಾಗದ ಪ್ರೊ.ರಾಮಾಂಜನೇಯ ಮಾತನಾಡಿ, ಯುವ ಜನಾಂಗ ಜಾನಪದದ ಮಹತ್ವವನ್ನು ಅರಿತುಕೊಳ್ಳಬೇಕು. ಜೀವನದಲ್ಲಿ ಜಾನಪದಕ್ಕೆ ಆದ್ಯತೆ ನಿಡಬೇಕು ಎಂದು ಹೇಳಿದರು.

ಎತ್ತಿನ ಬಂಡಿಯಲ್ಲಿಮೆರವಣಿಗೆ: ಕಾಲೇಜಿನ ಆವರಣದಲ್ಲಿ ಎತ್ತಿನ ಬಂಡಿ ಮೆರವಣಿಗೆ ನಡೆಯಿತು. ಪ್ರಾಧ್ಯಾಪಕರು,

ಪ್ರಾಧ್ಯಾಪಕಿಯರು ಹಾಗೂ ವಿದ್ಯಾರ್ಥಿಗಳು ವಿಶೇಷ ಬಟ್ಟೆ ಧರಿಸಿ, ಗಮನ ಸೆಳೆದರು. ಜಾನಪದ ಉತ್ಸವ ನಿಮಿತ್ತ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಜಾನಪದ ನೃತ್ಯ ಪ್ರದರ್ಶಿಸಿದರು. ವಿದ್ಯಾರ್ಥಿಗಳು ಡೊಳ್ಳು ಬಾರಿಸುವ ಮೂಲಕ ಗಮನ ಸೆಳೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net