ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಿ

11Huk1
Published on

ಹುಕ್ಕೇರಿ: ಇತರ ಇಲಾಖೆಗಳಿಂತ ಶಿಕ್ಷಣ ಇಲಾಖೆಯಲ್ಲಿ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ. ಸಮಾಜ ಮತ್ತು ಸರ್ಕಾರದ ಋಣ ತೀರಿಸಲು ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ತಾಲೂಕು ಮಾಧ್ಯಮಿಕ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘದ ಬೆಳ್ಳಿಹಬ್ಬದ ಸಮಾರಂಭ ಮತ್ತು ಮೇಲಂತಸ್ತಿನ ಕಟ್ಟಡ ಉದ್ಘಾಟನೆಯಲ್ಲಿ ಮಾತನಾಡಿದರು. ನಿಡಸೋಸಿಯ ಜಗದ್ಗುರು ಡಾ.ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮತ್ತು ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು ಮಾತನಾಡಿ, ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಅಪಾರ. ಆದರೆ, ಇತ್ತೀಚಿನ ದಿನಗಳಲ್ಲಿ ಶಿಕ್ಷಕರು ಪಾಠಕ್ಕಿಂತ ಬೇರೆ ಕಾರ್ಯಗಳಲ್ಲಿ ತೊಡಗಿರುತ್ತಾರೆ ಎಂದರು.

ಬೆಳ್ಳಿಹಬ್ಬದ ನೆನಪಿಗಾಗಿ ನಿರ್ಮಿಸಿದ ನೂತನ ಮೇಲಂತಸ್ತಿನ ಕಟ್ಟಡ, ವಾಣಿಜ್ಯ ಮಳಿಗೆಯ ನಾಮಲಕದ ಅನಾವರಣ ಹಾಗೂ ಬೆಳ್ಳಿಹಬ್ಬದ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಯಿತು. ನಂತರ ಸಹಕಾರಿ ಸಂಘದ ಸಂಸ್ಥಾಪಕ ಎಸ್.ಐ.ಸಂಬಾಳ ದಂಪತಿ ಹಾಗೂ ಅತಿಥಿಗಳನ್ನು ಸನ್ಮಾನಿಸಲಾಯಿತು.

ವಿರಕ್ತಮಠದ ಶಿವಬಸವ ಸ್ವಾಮೀಜಿ, ಸಿದ್ದೇಶ್ವರ ಶಿವಾಚಾರ್ಯರು, ಅಭಿನವ ಮಂಜುನಾಥ ಶ್ರೀಗಳು, ಮಾಜಿ ಸಚಿವರಾದ ಎ.ಬಿ.ಪಾಟೀಲ, ಶಶಿಕಾಂತ ನಾಯಿಕ, ವಿದ್ಯುತ್ ಸಹಕಾರಿ ಸಂಘದ ನಿರ್ದೇಶಕ ಪೃಥ್ವಿ ಕತ್ತಿ, ಮಹಾವೀರ ಉದ್ಯೋಗ ಸಮೂಹ ಸಂಸ್ಥೆ ಅಧ್ಯಕ್ಷ ಮಹಾವೀರ ನಿಲಜಗಿ, ಪುರಸಭೆ ಅಧ್ಯಕ್ಷ ಇಮ್ರಾನ ಮೋಮಿನ್, ಮಾಜಿ ಅಧ್ಯಕ್ಷ ಎ.ಕೆ.ಪಾಟೀಲ, ಬಿಇಒ ಪ್ರಭಾವತಿ ಪಾಟೀಲ, ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಸ್.ಅಂಗಡಿ, ಉಪಾಧ್ಯಕ್ಷ ಗೋವಿಂದ ಮುತಾಲಿಕ ಇತರರಿದ್ದರು. ಸಿ.ಎಂ.ದರಬಾರೆ ಸ್ವಾಗತಿಸಿದರು. ರಾಮಚಂದ್ರ ಕಾಕಡೆ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net