ಸ್ವಚ್ಛತಾ ಸಿಬ್ಬಂದಿ ಸೇವೆಯನ್ನು ಗೌರವಿಸೋಣ

2hnr1-ALVA
Published on

ಹೊನ್ನಾವರ: ‘ಸ್ವಚ್ಛತಾ ಸಿಬ್ಬಂದಿಯ ಸೇವೆ ಶ್ಲಾಘನೀಯವಾದುದು. ಅವರ ಸೇವೆಯನ್ನು ಎಲ್ಲರೂ ಗೌರವಿಸಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವ ಹೇಳಿದರು.


ಡಿ. ದೇವರಾಜ ಅರಸು ವಿಚಾರ ವೇದಿಕೆ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸ್ವಚ್ಛತಾ ಸಿಬ್ಬಂದಿಯನ್ನು ಗೌರವಿಸಿ ಅವರು ಮಾತನಾಡಿದರು.


ಹಿಂದುಳಿದ ವರ್ಗದವರನ್ನು ಮುನ್ನೆಲೆಗೆ ತರಬೇಕೆನ್ನುವ ವಿಚಾರಧಾರೆ ಹೊಂದಿ ಆ ನಿಟ್ಟಿನಲ್ಲಿ ಕೆಲಸ ಮಾಡಿದ್ದರು. ಇಂದು ಅವರ ಹೆಸರಿನ ಸಂಘಟನೆಯ ಮೂಲಕ ಸಾಮಾಜಿಕ ಕಾರ್ಯ ನಡೆಯುತ್ತಿದೆ. ಕರೊನಾ ಸಂದರ್ಭದಲ್ಲಿ ಸ್ವಚ್ಛತಾ ಸಿಬ್ಬಂದಿ ಅತ್ಯಂತ ಜವಾಬ್ದಾರಿಯುತ ಕೆಲಸ ಮಾಡಿದ್ದಾರೆ ಎಂದರು.
ವೇದಿಕೆಯ ಅಧ್ಯಕ್ಷ ಅನಂತ ನಾಯ್ಕ ಹೆಗ್ಗಾರ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘಟನೆಯ ಮೂಲಕ ಜನಪರ ಕೆಲಸ ಮಾಡಲಾಗುತ್ತಿದೆ. ಹೊನ್ನಾವರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಚತಾ ಸಿಬ್ಬಂದಿಯಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನೌಕರರನ್ನು ವೇದಿಕೆಯ ವತಿಯಿಂದ ಸನ್ಮಾನಿಸಲಾಗುತ್ತಿದೆ ಎಂದರು.


ಕಾಂಗ್ರೆಸ್ ಜಿಲ್ಲಾ ಹಿಂದುಳಿದ ವರ್ಗದ ಅಧ್ಯಕ್ಷ ಸತೀಶ್ ನಾಯ್ಕ, ಸಾಹಿತಿ ಡಾ. ಶ್ರೀಪಾದ ಶೆಟ್ಟಿ, ಸಾಹಿತಿ ಎಸ್.ಡಿ. ಹೆಗಡೆ, ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ರಾಜೇಶ್ ಕಿಣಿ, ಡಾ. ಪ್ರಕಾಶ ನಾಯ್ಕ, ಡಾ. ಕೃಷ್ಣಾ ಜಿ. ಡಾ. ಅನುರಾಧ ಪಟಗಾರ, ವೇದಿಕೆಯ ಸದಸ್ಯರು ಇದ್ದರು. ಆಸ್ಪತ್ರೆಯ ವೈದ್ಯಕೀಯ ಹಾಗೂ ಸ್ವಚ್ಛತಾ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net