ನೂರರಷ್ಟು ಮತದಾನಕ್ಕೆ ಶ್ರಮಿಸೋಣ

Let's strive for hundred percent voting
ವಿಜಯಪುರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಪಂ ಸಿಇಒ ರಿಶಿ ಆನಂದ ಪ್ರತಿಜ್ಞಾ ವಿಧಿ ಬೋಧಿಸಿದರು. ಕೆ. ಹೊಂಗಯ್ಯ, ಸುರೇಶ ಶೆಡಶ್ಯಾಳ, ರಾಜಶೇಖರ ಧೈವಾಡಿ ಮತ್ತಿತರರಿದ್ದಾರೆ.
Published on

ವಿಜಯಪುರ: ಪ್ರಸಕ್ತ ಸಾಲಿನಲ್ಲಿನ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಶೇಕಡಾ ನೂರರಷ್ಟು ಮತದಾನಕ್ಕೆ ನಾವೆಲ್ಲರೂ ಶ್ರಮಿಸೋಣ ಎಂದು ಜಿಪಂ ಸಿಇಒ ರಿಶಿ ಆನಂದ ಅಧಿಕಾರಿಗಳಿಗೆ ತಿಳಿಸಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು ಮತದಾನದ ಮಹತ್ವ ಕುರಿತು ಮಾತನಾಡಿದರು.

ಮತದಾನ ಪ್ರತಿಯೊಬ್ಬರ ಹಕ್ಕು. ಅದನ್ನು ಚಲಾಯಿಸುವಂತೆ ನೋಡಿಕೊಳ್ಳಬೇಕು. ಜಾಗೃತಿ ಮೂಡಿಸಬೇಕು. ಮತದಾನಕ್ಕೆ ಪ್ರೇರೇಪಿಸಬೇಕೆಂದರು. ಎಲ್ಲ ಕ್ರೀಡಾಪಟುಗಳೊಂದಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ (ಪ್ರಭಾರ) ಕೆ. ಹೊಂಗಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೆಡಶ್ಯಾಳ, ಜಿಲ್ಲಾ ಕಾರ್ಯದರ್ಶಿ ರಾಜಶೇಖರ ಧೈವಾಡಿ, ಕ್ರೀಡಾ ಕಾರ್ಯದರ್ಶಿ ಎಸ್.ಎಸ್. ಕೆರೂರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ವಿಜಯಕುಮಾರ ಹತ್ತಿ, ಗೌರವಾಧ್ಯಕ್ಷ ವಿಶ್ವನಾಥ ಬೆಳೆನ್ನವರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಗಂಗಾಧರ ಜೇವೂರ, ಇನ್ನೋರ್ವ ಕ್ರೀಡಾ ಕಾರ್ಯದರ್ಶಿ ನಿಜು ಮೇಲಿನಕೇರಿ, ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಜಾವೀದ ಜಮಾದಾರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net