ಪರಿಸರ ಸಂರಕ್ಷಣೆ ಕಾಳಜಿ ವಹಿಸಲಿ

10-SGN-2
Published on

ಶಿಗ್ಗಾಂವಿ: ಪರಿಸರ ಕಾಳಜಿಯು ಕೇವಲ ದಿನಾಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬರು ಪ್ರತಿನಿತ್ಯ ಪರಿಸರ ಸಂರಕ್ಷಣೆಯ ಕಾಳಜಿ ವಹಿಸಬೇಕು ಎಂದು ಶಾಸಕ ಯಾಸೀರಖಾನ್ ಪಠಾಣ ಹೇಳಿದರು.

ತಾಲೂಕಿನ ರಾಜೀವ ಗ್ರಾಮದ ಚಂದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ದುಂಡಸಿ ವಲಯ ಅರಣ್ಯ ಇಲಾಖೆಯ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಹದಗೆಡುತ್ತಿರುವುದರಿಂದ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಮರುಬಳಕೆಯ ವಸ್ತುಗಳನ್ನು ಉಪಯೋಗಿಸುವುದರಿಂದ ಪರಿಸರ ಮಾಲಿನ್ಯ ತಡೆಗಟ್ಟಬಹುದು ಎಂದರು.

ನಮ್ಮ ಸುತ್ತಮುತ್ತಲಿನ ಪರಿಸರವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗಿ ಉತ್ತಮ ಆಮ್ಲಜನಕದ ವಾತಾವರಣ ದೊರೆಯುತ್ತದೆ ಎಂದರು.

ತಹಸೀಲ್ದಾರ್ ರವಿಕುಮಾರ ಕೊರವರ, ಆರ್​ಎಫ್​ಒ ರವಿಕುಮಾರ ಪುರಾಣಿಕಮಠ, ದುಂಡಸಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು, ಶಾಲಾ ಸಿಬ್ಬಂದಿ, ಗ್ರಾಮದ ಪ್ರಮುಖರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net