ದುಡಿಯೋಣ ಬಾ ಅಭಿಯಾನ

RAHUL SHINDE ZP CEO
Published on

ಬೆಳಗಾವಿ: ಜಿಲ್ಲೆಯ ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಮೇ 1ರಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದುಡಿಯೋಣ ಬಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಅರ್ಹರು ಉದ್ಯೋಗ ಪಡೆದುಕೊಳ್ಳಬಹುದು ಎಂದು ಜಿಪಂ ಸಿಇಒ ರಾಹುಲ್​ ಶಿಂಧೆ ತಿಳಿಸಿದ್ದಾರೆ.

ಈ ಅಭಿಯಾನದ ಮೂಲಕ ಅರ್ಹ ಕೂಲಿಕಾರರಿಗೆ ಮನರೇಗಾ ಯೋಜನೆಯ ಕುರಿತು ಮಾಹಿತಿ ನೀಡಲಾಗುತ್ತಿದ್ದು, ನರೇಗಾ ಯೋಜನೆಯಡಿ ಕೂಲಿಕಾರರಿಗೆ 100 ದಿನಗಳ ಕೌಶಲವಲ್ಲದ ಕೆಲಸ ಒದಗಿಸಲು ದುಡಿಯೋಣ ಬಾ ಅಭಿಯಾನ ಈಗಾಗಲೇ ಜಿಲ್ಲೆಯಲ್ಲಿ ನಡೆಸಲಾಗುತ್ತಿದೆ.

ಅಭಿಯಾನದ ಉದ್ದೇಶಗಳು: ನರೇಗಾ ಯೋಜನೆಯಡಿ ಒಳಗೊಳ್ಳದ ಕುಟುಂಬಗಳನ್ನು ಗುರುತಿಸಿ ಕೌಶಲರಹಿತ ಕೆಲಸಕ್ಕಾಗಿ ನೋಂದಾಯಿಸುವುದು. ನೋಂದಾಯಿತ ಕೂಲಿಕಾರರಿಗೆ ನಿರಂತರ ಕೆಲಸ ಒದಗಿಸಿ ವಲಸೆ ತಗ್ಗಿಸುವುದು. ದುರ್ಬಲ ವರ್ಗದ ಕುಟುಂಬಗಳು ಹಾಗೂ ಅಂಗವಿಕಲರು, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರ ಭಾಗವಹಿಸುವಿಕೆ ಪ್ರಮಾಣ ಹೆಚ್ಚಿಸುವುದು. ಯೋಜನೆಗೆ ಸಂಬಂಧಿಸಿದಂತೆ ಆಯಾ ಗ್ರಾಪಂಗಳಲ್ಲಿ ಸಾರ್ವಜನಿಕರು ಮಾಹಿತಿ ಪಡೆದುಕೊಳ್ಳಬಹುದು ಎಂದಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net