ವಿಮಾನ ನಿಲ್ದಾಣ ಸಾಕಾರಕ್ಕೆ ಶ್ರಮಿಸಲಿ

2
Published on

ಸಚಿವರಿಗೆ ಮಾಜಿ ಸಂಸದ ಜಿ.ಎಸ್​.ಬಸವರಾಜು ಒತ್ತಾಯ | ಕೇಂದ್ರ ಸಚಿವ ಸೋಮಣ್ಣಗೆ ಮನವಿ

ವಿಜಯವಾಣಿ ಸುದ್ದಿಜಾಲ ತುಮಕೂರು
ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು-&2 ನಿಮಾರ್ಣವಾಗಬೇಕು ಎಂಬ ನನ್ನ ಬಹುದಿನ ಕನಸು ಸಾಕಾರವಾಗುವ ಕಾಲ ಸನ್ನಿಹಿತವಾಗಿದ್ದು, ಕೇಂದ್ರ ಸರ್ಕಾರದಿಂದ ಒಪ್ಪಿಗೆ ಪಡೆಯಲು ಜಿಲ್ಲೆಯ ಜನಪ್ರತಿನಿಧಿಗಳು ಶ್ರಮಿಸಬೇಕು ಎಂದು ಮಾಜಿ ಸಂಸದ ಜಿ.ಎಸ್​.ಬಸವರಾಜು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.


ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡಲು ತುಮಕೂರು ಜಿಲ್ಲೆಯಲ್ಲಿ ಬೆಂಗಳೂರು-&2 ವಿಮಾನ ನಿಲ್ದಾಣ ಮಾಡಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದೆ. ಕೇಂದ್ರ ಸರ್ಕಾರದಿಂದ ಯೋಜನೆಗೆ ಒಪ್ಪಿಗೆ ಪಡೆಯುವ ಜವಾಬ್ದಾರಿ ಕೇಂದ್ರ ಸಚಿವ ವಿ.ಸೋಮಣ್ಣ, ರಾಜ್ಯ ಸರ್ಕಾರದ ಸಚಿವರಾದ ಪರಮೇಶ್ವರ, ರಾಜಣ್ಣ, ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಜಯಚಂದ್ರ ಅವರ ಮೇಲಿದೆ ಎಂದರು.


ನಾನು ಸಂಸದನಾಗಿದ್ದಾಗ ತುಮಕೂರು ಜಿಲ್ಲಾ ದಿಶಾ ಸಮಿತಿ ಸಭೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಬಗ್ಗೆ ಸ್ಥಳ ಗುರುತಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಲಾಗಿತ್ತು. ತುಮಕೂರು ಕಡತದ ಾಲೋ ಅಪ್​ ಮಾಡಿದ್ದರಿಂದ ರಾಜ್ಯ ಸರ್ಕಾರ ಯೋಜನೆಗೆ ಚಾಲನೆ ನೀಡಿದೆ ಎಂದರು. ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸುವಾಗ, ಮಧುಗಿರಿ, ಕೊರಟಗೆರೆ, ಶಿರಾ ಮತ್ತು ತುಮಕೂರು ತಾಲೂಕು ವ್ಯಾಪ್ತಿಯಲ್ಲಿ ಸಾವಿರಾರು ಎಕರೆ ಜಮೀನು ಈಗಾಗಲೇ ಗುರುತಿಸಿ, ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಗೆ ಅನುಮತಿ ನೀಡಲು ಕೇಂದ್ರ ಸಚಿವರು ಶ್ರಮಿಸಬೇಕು ಎಂದು ಮನವಿ ಮಾಡಿದರು.


ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪ್ರಸ್ತಾವನೆಗಳಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವೈಮಾನಿಕ ದೂರ ತುಮಕೂರು 80 ಕಿ.ಮೀ, ದೊಡ್ಡಬಳ್ಳಾಪುರ 46 ಕಿಮೀ, ದಾಬಸ್​ಪೇಟೆ 50 ಕಿಮೀ. ನೆಲಮಂಗಲ 42 ಕಿಮೀ, ರಾಮನಗರ 64 ಕಿಮೀ. ದೂರವಿದೆ. ಉದ್ದೇಶಿತ ಎಲ್ಲ ಪ್ರಸ್ತಾವನೆಗಳ ವೈಮಾನಿಕ ದೂರಕ್ಕಿಂತ, ತುಮಕೂರು ಪ್ರಸ್ತಾವನೆ ದೂರ ಇದ್ದರೂ ರಾಜ್ಯ ಸರ್ಕಾರ ಗುರುತಿಸಿರುವ ಎಲ್ಲ ಸ್ಥಳಗಳಿಗಿಂತ ಉತ್ತಮವಾಗಿದೆ ಎಂದರು. ಅಭಿವೃದ್ಧಿಯಲ್ಲಿ ಸಾಮಾಜಿಕ ನ್ಯಾಯ ದೊರಕಲಿದೆ. ರಾಜ್ಯದ ಬಹುತೇಕ ಪ್ರದೇಶಗಳಿಗೆ ಅನುಕೂಲವಾಗಲಿದೆ. ಸರ್ಕಾರಿ ಜಮೀನು ಜಾಸ್ತಿ ಇದೆ, ಉದ್ದೇಶಿತ ಬೇರೆ ಪ್ರಸ್ತಾವನೆಗಳ ಜಮೀನಿಗೆ ಹೋಲಿಸಿದರೆ, ಇಲ್ಲಿ ಜಮೀನು ಬೆಲೆ ಕಡಿಮೆ ಇದೆ. ಕೈಗಾರಿಕಾ ಕ್ರಾಂತಿಗೆ ಪೂರಕವಾಗಲಿದೆ ಎಂದರು.


ಯಾವ ಸ್ಥಳ ಸೂಕ್ತ ಎಂಬುದನ್ನು ಕೇಂದ್ರ ಸರ್ಕಾರ ನಿರ್ಧರಿಸಲಿ, 19 ಜಿಲ್ಲೆಗಳ ಹೆಬ್ಬಾಗಿಲು ತುಮಕೂರು ಜಿಲ್ಲೆಯಾಗಿದ್ದು, ಬೆಂಗಳೂರು-&ಪುಣೆ ಎಕನಾಮಿಕ್​ ಕಾರಿಡಾರ್​, ಚೆನೈ ಚಿತ್ರದುರ್ಗ ಇಂಡಸ್ಟ್ರಿಯಲ್​ ಕಾರಿಡಾರ್​, ಉದ್ದೇಶಿತ ಬೀದರ್​-&ಬೆಂಗಳೂರು ಎಕ್ಸ್​ಪ್ರೆಸ್​ ಹೈವೇ, ಸುಮಾರು 12500 ಎಕರೆ ಪ್ರದೇಶದಲ್ಲಿ ನಿಮಾರ್ಣವಾಗುತ್ತಿರುವ ಇಂಡಸ್ಟ್ರಿಯಲ್​ ನೋಡ್​ ಅಭಿವೃದ್ಧಿಗೂ ಪೂರಕವಾಗಲಿದೆ ಎಂದರು.


ಹೇಮಾವತಿ, ಎತ್ತಿನಹೊಳೆ, ಭದ್ರಾ ಮೇಲ್ದಂಡೆ, ಉದ್ದೇಶಿತ ಶರಾವತಿ ನೀರಿನ ಯೋಜನೆಯ ವಾಟರ್​ ಬ್ಯಾಂಕ್​ ಜಾಲಗುಣಿಯ ಬಳಿ ನಿಮಾರ್ಣವಾಗಲಿದೆ. ಈ ಎಲ್ಲ ನದಿಗಳ ನೀರು ಬಳಸಲು ಅನೂಕೂಲವಾಗಲಿದೆ. ಈ ಪ್ರಸ್ತಾವನೆ ಹಿಂದುಳಿದ ಪ್ರದೇಶವಾಗಿದ್ದು, ಅಭಿವೃದ್ಧಿಗೆ ಮುನ್ನುಡಿ ಬರೆಯಲಿದೆ ಎಂದರು. ಈಗಾಗಲೇ ಮೈಸೂರಿನಲ್ಲಿ ಏರ್​ಪೋರ್ಟ್​ ಇರುವುದರಿಂದ, ಬೆಂಗಳೂರು&-ಮೈಸೂರು ರಸ್ತೆಯ ಪ್ರಸ್ತಾವನೆ ಅಭಿವೃದ್ಧಿಯಲ್ಲಿ ಸಾಮಾಜಿಕ ನ್ಯಾಯ ಸಮ್ಮತವಲ್ಲ. ಇಲ್ಲಿನ ಜಮೀನು ಬೆಲೆಯೂ ಅತ್ಯಂತ ದುಬಾರಿಯಾಗಲಿದೆ. ಹಾಗಾಗಿ 19 ಜಿಲ್ಲೆಗಳ ಚುನಾಯಿತ ಜನಪ್ರತಿನಿಧಿಗಳು ಧ್ವನಿ ಎತ್ತಬೇಕಿದೆ. ಯಾವುದೇ ಬೃಹತ್​ ವಿಶೇಷ ಯೋಜನೆಗೆ ವೈಜ್ಞಾನಿಕ ಅಭಿವೃದ್ಧಿ ಲಾಬಿ ಬಹಳ ಕೆಲಸ ಮಾಡಲಿದೆ ಎಂದರು.


ಸುದ್ದಿಗೋಷ್ಠಿಯಲ್ಲಿ ಅಭಿವೃದ್ಧಿ ರೆವಲ್ಯೂಷನ್​ ೋರಂ ಅಧ್ಯಕ್ಷ ಕುಂದರನಹಳ್ಳಿ ರಮೇಶ್​, ನಿವೃತ್ತ ಪ್ರಾಚಾರ್ಯ ಶಿವರುದ್ರಪ್ಪ ಇದ್ದರು.

ಉದ್ದೇಶಿತ ಮಾದವಾರ-&ತುಮಕೂರು ಮೆಟ್ರೋ ಮಾರ್ಗ ಮತ್ತು ಉದ್ದೇಶಿತ ಉಪನಗರ ರೈಲ್ವೇ ಮಾರ್ಗವನ್ನು ವಸಂತನರಸಾಪುರದವರೆಗೆ ವಿಸ್ತರಣೆ ಮಾಡಲೇಬೇಕಿದೆ. ಇಂಡಸ್ಟ್ರೀಯಲ್​ ನೋಡ್​ನಲ್ಲಿ ಜಮೀನು ಪಡೆದವರಲ್ಲಿ ಬೆಂಗಳೂರಿನ ಉದ್ಯಮಿಗಳೇ ಜಾಸ್ತಿ ಇದ್ದಾರೆ. ತುಮಕೂರು ಏರ್​ಪೋರ್ಟ್​ ಪ್ರಸ್ತಾವನೆ, ಉದ್ದೇಶಿತ ಬೀದರ್​-&ಬೆಂಗಳೂರು ಎಕ್ಸ್​ಪ್ರೆಸ್​ನಿಂದ ನೇರವಾಗಿ ಬೆಂಗಳೂರು ಬಿಸಿನೆಸ್​ ಕಾರಿಡಾರ್​ಗೆ ಸಂಪರ್ಕವಾಗುವುದರಿಂದ ಬೆಂಗಳೂರು-&ತುಮಕೂರು ರಸ್ತೆ ಒತ್ತಡ ಕಡಿಮೆಯಾಗಲಿದೆ.| ಜಿ.ಎಸ್​.ಬಸವರಾಜು ಮಾಜಿ ಸಂಸದ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net