

ಅಳವಂಡಿ: ಗ್ರಂಥಾಲಯ ಜ್ಞಾನದ ಖಣಜ ಇದ್ದಂತೆ. ಅದನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಿಕ್ಷಕ ಮರ್ದಾನಲಿ ಗಡಾದ ಹೇಳಿದರು.
ಸಮೀಪದ ಬೆಟಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದಿಂದ ಆಯೋಜಿಸಿದ್ದ ನನ್ನ ಶಾಲಾ ಗ್ರಂಥಾಲಯದಲ್ಲಿ 21 ದಿನಗಳ ಓದುವ ಅಭಿಯಾನ ಉದ್ದೇಶಿಸಿ ಮಂಗಳವಾರ ಮಾತನಾಡಿದರು.
ಇದನ್ನು ಓದಿ : ಓದುವ ಹವ್ಯಾಸದಿಂದ ಜ್ಞಾನ ವೃದ್ಧಿ
ವಿದ್ಯಾರ್ಥಿ ಸಮೂಹದಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಕಡಿಮೆಯಾಗಿದೆ. ಮೊಬೈಲ್ ದಾಸರಾಗಿ ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮನುಷ್ಯನಿಂದ ಏನಾದರೂ ಕಸಿದುಕೊಳ್ಳಬಹುದು, ಆದರೆ ಜ್ಞಾನವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದರು.
ಮುಖ್ಯ ಶಿಕ್ಷಕ ಗಿರಿಯಪ್ಪ ಹಾರನಹಳ್ಳಿ ಮಾತನಾಡಿ, ಪುಸ್ತಕಗಳನ್ನು ಓದುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ. ಗ್ರಂಥಾಲಯದ ಪುಸ್ತಕಗಳನ್ನು ಹೆಚ್ಚು ಹೆಚ್ಚು ಓದಬೇಕು. ಈ ಅಭಿಯಾನದಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲಿ 21 ದಿನಗಳ ಕಾಲ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಮಕ್ಕಳಿಗೆ ಗ್ರಂಥಾಲಯ ಮತ್ತು ಪುಸ್ತಕದ ಮಹತ್ವ ತಿಳಿಸಿಕೊಡುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.