ಅಂಗನವಾಡಿ ನಿರ್ಮಾಣದ ಭೂಮಿಗಾಗಿ ಸಿಇಒಗೆ ಪತ್ರ

Published on

ಬಳ್ಳಾರಿ : ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಅನುಷ್ಠಾನದ ಜವಾಬ್ದಾರಿ ಹೊಂದಿರುವ ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಭೂಮಿ ಒದಗಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಪಂ ಸಿಇಒ ಗಳಿಗೆ ಪತ್ರ ಬರೆಯಲಾಗಿದೆ.

ರಾಜ್ಯದಲ್ಲಿ ಒಟ್ಟು 69,922 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳಲ್ಲಿ ಕೇವಲ 47,450 ಕೇಂದ್ರಗಳು ಮಾತ್ರ ಸ್ವಂತ ಕಟ್ಟಡಗಳನ್ನು ಹೊಂದಿದ್ದರೆ, 13,066 ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. 9,406 ಕೇಂದ್ರಗಳು ಇತರ ಸರ್ಕಾರಿ ಕಟ್ಟಡಗಳಲ್ಲಿ ನಡೆಯುತ್ತಿವೆ. ಜಿಲ್ಲೆಯಲ್ಲಿ 1,358 ಅಂಗನವಾಡಿ ಕೇಂದ್ರಗಳಿದ್ದು, ಅವುಗಳಲ್ಲಿ 881 ಸ್ವಂತ ಕಟ್ಟಡಗಳನ್ನು ಹೊಂದಿವೆ. ಸುಮಾರು 103 ಕೇಂದ್ರಗಳು ಸರ್ಕಾರಿ ಶಾಲೆಗಳು ಸೇರಿದಂತೆ ಇತರ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ, 374 ಕೇಂದ್ರಗಳು ಬಾಡಿಗೆ ಆವರಣದಲ್ಲಿ ನಡೆಯುತ್ತಿವೆ.

===

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net