ಕೆಎಸ್‌ಆರ್‌ಟಿಸಿ ಡಿಪೋ ಅಧಿಕಾರಿಗಳ ವಿರುದ್ಧ ಡಿಸಿಗೆ ಪತ್ರ

nrp 1..
Published on

ಎನ್.ಆರ್.ಪುರ: ತಾಲೂಕು ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ವಿರಳವಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ ಗ್ಯಾರಂಟಿ ಸಮಿತಿ ಸಭೆಯಲ್ಲಿ ಚರ್ಚಿಸಿ ಬಸ್‌ಗಳನ್ನು ಬಿಡುವಂತೆ ತಿಳಿಸಿದರೂ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಡಿಪೋ ಅಧಿಕಾರಿಗಳು ಸ್ಪಂದಿಸದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಡಿಸಿ, ಸಿಇಒಗೆ ಪತ್ರ ಬರೆಯಲು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸಮಿತಿ ಸದಸ್ಯರದ ಇಂದಿರಾನಗರ ರಘು ಹಾಗೂ ಬೇಸಿಲ್ ಮಾತನಾಡಿ, ತಾಲೂಕಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ಲಿಸದಿರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ. ಎನ್.ಆರ್.ಪುರದಿಂದ ಚಿಕ್ಕಮಗಳೂರು ಮೂಲಕ ಮೈಸೂರು ಹೋಗುವ ಬಸ್ ವಾರದಲ್ಲಿ ಎರಡು ದಿನ ಬರುವುದಿಲ್ಲ. ಇನ್ನು ಕೆಲವು ಬಸ್‌ಗಳು ಬಸ್ ನಿಲ್ದಾಣಕ್ಕೆ ಬರುವುದೇ ಇಲ್ಲ. ಮೈಸೂರಿಗೆ ಹೋಗುವ ಬಸ್ ಪ್ರತಿನಿತ್ಯ ಬರಬೇಕು. ಜನವಸತಿ ಪ್ರದೇಶಗಳಲ್ಲಿ ಬಸ್ ನಿಲುಗಡೆಗೆ ಸೂಚಿಸಬೇಕು ಎಂದರು.

ಸಮಿತಿ ಸದಸ್ಯರಾದ ಜಿ.ನಾಗರಾಜ್, ಇಸ್ಮಾಯಿಲ್, ಹೂವಮ್ಮ, ಜಯರಾಂ, ದೇವರಾಜ್, ಕ್ಷೇತ್ರ ಕುಮಾರ್, ಸಂದೀಪ್, ಸೈಯದ್‌ಶಫೀರ್ ಅಹಮ್ಮದ್, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಎನ್.ಎಲ್.ಮನೀಶ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net