ಸಾರ್ವಜನಿಕರು ನೈಜ ಮಾಹಿತಿ ನೀಡಲಿ

6 KDL 01
ಕೂಡ್ಲಿಗಿ 2ನೇ ವಾರ್ಡ್‌ನಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕಾರ್ಯವನ್ನು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಪರಿಶೀಲನೆ ನಡೆಸಿದರು. ತಹಸೀಲ್ದಾರ್ ವಿ.ಕೆ.ನೇತ್ರಾವತಿ, ಪಪಂ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ಶಿಕ್ಷಣ ಸಮನ್ವಯಾಧಿಕಾರಿ ಎಸ್.ಎಸ್.ಜಗದೀಶ್, ಶಫಿ ಇಂಜಿನಿಯರ್ ಇದ್ದರು.
Published on

ಕೂಡ್ಲಿಗಿ: ಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಗಣತಿದಾರರಿಗೆ ಸಾರ್ವಜನಿಕರು ಸಮಗ್ರ ಮಾಹಿತಿ ನೀಡಬೇಕು ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.

ಪಟ್ಟಣದ 2ನೇ ವಾರ್ಡ್‌ನಲ್ಲಿ ಗಣತಿ ಕಾರ್ಯ ವೀಕ್ಷಿಸಿ ಮಾತನಾಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತಾಲೂಕಿನಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ. ಸಾರ್ವಜನಿಕರು ಗಣತಿದಾರರಿಗೆ ಸಹಕರಿಸಿ, ಜಾತಿ, ಉಪ ಜಾತಿ ಸೇರಿದಂತೆ ಎಲ್ಲ ಪ್ರಶ್ನೆಗಳಿಗೂ ನಿಖರವಾದ ಉತ್ತರ ನೀಡಬೇಕು. ಸಾರ್ವಜನಿಕರ ಅನುಕೂಲಕ್ಕೆ ಗಣತಿ ಉಪಯುಕ್ತವಾಗಿದೆ ಎಂದರು.

ಶೋಷಿತ, ಹಿಂದುಳಿದ ವರ್ಗಗಳ ಜನರಿಗೆ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳು ಸಮರ್ಪಕವಾಗಿ ದೊರೆಯಬೇಕು. ಶಿಕ್ಷಣ ಹಾಗೂ ಉದ್ಯೋಗದಲ್ಲಿ ಅರ್ಹರಿಗೆ ಸರ್ಕಾರದ ಸೌಲಭ್ಯಗಳು ಸಿಗಬೇಕು. ಗಣತಿದಾರರು ಸಹ ಪ್ರತಿ ಮನೆಗೂ ಭೇಟಿ ನೀಡಿ ಕುಟುಂಬಸ್ಥರು ನೀಡುವ ನೈಜ ಮಾಹಿತಿಯನ್ನು ನಮೂದು ಮಾಡಬೇಕು ಎಂದರು.

ತಹಸೀಲ್ದಾರ್ ವಿ.ಕೆ.ನೇತ್ರಾವತಿ ಮಾತನಾಡಿ, ಈಗಾಗಲೇ ತಾಲೂಕಿನಲ್ಲಿ ಶೇ.90 ಗಣತಿ ಕಾರ್ಯ ಯಶಸ್ವಿಯಾಗಿದೆ. ಆರಂಭದ ಎರಡು ದಿನಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಬಿಟ್ಟರೆ ಯಾವುದೇ ತೊಂದರೆ ಆಗಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net