ಗೃಹಲಕ್ಷ್ಮೀ ಹಣದಲ್ಲಿ ಬೈಕ್ ಖರೀದಿ; ಸಚಿವೆ ಹೆಬ್ಬಾಳ್ಕರ್ ಅಭಿನಂದನೆ

IMG-20241010-WA0018.jpg
Published on

ಬೆಳಗಾವಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಯೊಬ್ಬರು ಹಣಕೂಡಿಟ್ಟು ಮಗನಿಗೆ ಬೈಕ್ ಖರೀದಿಸಿ ಕೊಟ್ಟಿದ್ದಾಳೆ.

ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯ ಹಣ ಕೂಡಿಟ್ಟು, ತನ್ನ ಮಗ ರಮೇಶ ನೀಲಪ್ಪ ಸಣ್ಣಕ್ಕಿಗೆ ದ್ವಿಚಕ್ರ ವಾಹನ ಕೊಡಿಸುತ್ತಿದ್ದಾರೆ.

ಶುಕ್ರವಾರ ಬೈಕ್ ಖರೀದಿಸಲು ಮುಂಗಡ ಹಣ ನೀಡಿದ್ದಾರೆ.

'ಗೃಹಲಕ್ಷಿ' ಯೋಜನೆಯ ಹಣ ಇಂದು ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಬದುಕು ಕಟ್ಟಿಕೊಳ್ಳಲು ನೆರವಾಗಿದೆ.

ಮಹಾನವಮಿ ಅ.11ರಂದು ಹಬ್ಬದಂದು ದ್ವಿಚಕ್ರ ವಾಹನ ಕೊಳ್ಳಲು ಮುಂದಾಗಿರುವ ಮಗನಿಗೆ ತಾಯಿ ಗೃಹಲಕ್ಷ್ಮೀ ಹಣ ನೀಡಿರುವ ವಿಷಯ ಕೇಳಿ ಖುಷಿಯಾಗಿದೆ. ತಾಯಿ -ಮಗನಿಗೆ ಮನಃಪೂರ್ವಕವಾಗಿ ಶುಭ ಕೋರುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net