ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

IMG_20240820_203512_327-1.jpg
Published on

ಹುಬ್ಬಳ್ಳಿ: ಗ್ರಂಥಾಲಯ ಪಿತಾಮಹ ಪದ್ಮಶ್ರೀ ಡಾ. ಎಸ್.ಆರ್. ರಂಗನಾಥನ್ ಅವರ 132ನೇ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನು ಇತ್ತೀಚೆಗೆ ಚಿನ್ಮಯ ಪದವಿಪೂರ್ವ ಮತ್ತು ಪದವಿ ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು.

ಅತಿಥಿಯಾಗಿದ್ದ ಚಿನ್ಮಯ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸಿ.ಎ. ಗಿರೀಶ ಉಪಾಧ್ಯಾಯ, ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವವು ಬದಲಾಗುವುದು ಗ್ರಂಥಾಲಯದಿಂದ. ನಿರಂತರ ಓದಿನಿಂದ ಸಾಧನೆಯನ್ನು ಮಾಡಲು ಸಾಧ್ಯ. ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣದಲ್ಲಿ ಗ್ರಂಥಾಲಯದ ಪಾತ್ರ ಬಹಳಷ್ಟಿದೆ ಎಂದರು.

ಗ್ರಂಥಾಲಯಕ್ಕೆ ಒಂದು ವೈಜ್ಞಾನಿಕ ಸ್ವರೂಪ ನೀಡಿದವರು ಡಾ. ಎಸ್.ಆರ್. ರಂಗನಾಥನ್ ಅವರು ಎಂದು ಸ್ಮರಿಸಿದರು.

ಪ್ರಾಚಾರ್ಯ ವಿನಾಯಕ ಬಿ.ಕೆ, ಆಡಳಿತಾಧಿಕಾರಿ ವಿಶ್ವನಾಥ ರಾನಡೆ, ಗ್ರಂಥಪಾಲಕ ಚಂದ್ರಶೇಖರ ಚನ್ನಂಗಿ, ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net