

ಮುಂಡರಗಿ: ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಗ್ರಂಥಾಲಯಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ತಾಪಂ ಇಒ ವಿಶ್ವನಾಥ ಹೊಸಮನಿ ಹೇಳಿದರು.
ಪಟ್ಟಣದ ತಾಪಂ ಸಾಮರ್ಥ್ಯ ಸೌಧದಲ್ಲಿ ಅಬ್ದುಲ್ನಜೀರ್ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು, ಜಿಪಂ ಗದಗ, ತಾಪಂ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಹೈಬ್ರೀಡ್ ಮಾದರಿ ಮುಖಾಮುಖಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಕೇಂದ್ರೀಕೃತ ತರಬೇತಿ ಸಂಯೋಜಕ ಮಂಜುನಾಥ ಮುಧೋಳ ಮಾತನಾಡಿ, ತಾಲೂಕಿನಲ್ಲಿ ಅರಿವು ಕೇಂದ್ರದ ಸಲಹಾ ಸಮಿತಿ ಸದಸ್ಯರ ಒಟ್ಟು 5 ತಂಡಗಳಿಗೆ ತರಬೇತಿ ನೀಡಲಾಗುತ್ತದೆ. ತರಬೇತಿಯಲ್ಲಿ ಅರಿವು ಕೇಂದ್ರದ ಪರಿಚಯ, ಸಲಹಾ ಸಮಿತಿ ರಚನೆ ಜವಾಬ್ದಾರಿಗಳು, ಗ್ರಂಥಾಲಯಗಳ ಕಾರ್ಯ ಚಟುವಟಿಕೆ, ಬಿಕೆನ್ ಲೈಬ್ರರಿ, ಕ್ರಿಯಾ ಯೋಜನೆ ತಯಾರಿಕೆ ಕುರಿತು ಮಾಹಿತಿ ನೀಡಲಾಗುವುದು ಎಂದರು.
ತಾಪಂ ಸಹಾಯಕ ನಿರ್ದೇಶಕ ಪ್ರವೀಣ ಗೋಣೆಮ್ಮನವರ ಮಾತನಾಡಿದರು. ತಾಪಂ ಯೋಜನಾಧಿಕಾರಿ ವಿಜಯಕುಮಾರ ಬೆಣ್ಣಿ, ತಾಪಂ ವ್ಯವಸ್ಥಾಪಕ ಫಕ್ರುದ್ದೀನ್ ನದಾಫ್, ಲಲಿತಾ ಜೊಂಡಿ, ಶಾಬುದ್ದಿನ್ ನದಾಫ್, ಗ್ರಾಪಂ ಅಧ್ಯಕ್ಷರು, ಪಿಡಿಒ, ಗ್ರಂಥಾಲಯ ಮೇಲ್ವಿಚಾರಕರು, ಎನ್ಜಿಒ, ಯುವಕ-ಯುವತಿ ಮಂಡಳಿ ಸದಸ್ಯರು, ರೈತ ಪ್ರತಿನಿಧಿಗಳು ಇತರರು ಇದ್ದರು.