

ಹಿರೇಕೆರೂರ: ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಪುಸ್ತಕಗಳಿಗೆ ಇರುವ ಸ್ಥಾನಮಾನ ಯಾವತ್ತೂ ಕಡಿಮೆಯಾಗುವುದಿಲ್ಲ., ವಿದ್ಯಾರ್ಥಿಗಳಲ್ಲಿ ಇಂದು ಓದುವ ಹವ್ಯಾಸ ಕ್ಷೀಣಿಸುತ್ತಿದ್ದು, ನಿತ್ಯ ಓದುವುದನ್ನು ರೂಢಿಸಿಕೊಳ್ಳಬೇಕು ಎಂದು ಸಿಇಎಸ್ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್.ಎಸ್.ಪಾಟೀಲ ಹೇಳಿದರು.
ಪಟ್ಟಣದ ಸಿಇಎಸ್ ವಿದ್ಯಾಸಂಸ್ಥೆಯ ಬಿ.ಆರ್. ತಂಬಾಕದ ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ಗ್ರಂಥಾಲಯ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.
ಪ್ರತಿ ವರ್ಷ ಆ.12ನೇ ತಾರೀಖು ಗ್ರಂಥಪಾಲಕರ ದಿನಾಚರಣೆ ಮಾಡುತ್ತ ಬಂದಿದ್ದೇವೆ. ಇಂದಿನ ಡಿಜಿಟಲ್ ಯುಗದಲ್ಲಿಯೂ ಗ್ರಂಥಾಲಯ ವಿಜ್ಞಾನದ ಪಿತಾಮಹರಾದ ಡಾ.ಎಸ್.ಆರ್. ರಂಗನಾಥನ್ ಅವರನ್ನು ನಾವು ಸ್ಮರಿಸಲೇಬೇಕು. ಗ್ರಂಥಾಲಯಗಳು ಎಂದರೆ ಜ್ಞಾನದ ಸಾಗರ, ಪುರಾಣ, ಇತಿಹಾಸ ಕಾಲದಿಂದಲೂ ಇಂದಿನ ಡಿಜಿಟಲ್ ಯುಗದ ವರೆಗೂ ಅನೇಕ ಪಂಡಿತರು, ಸಂಶೋಧಕರು, ಅನುಭಾವಿಗಳು ತಮ್ಮ ಶ್ರಮ, ಸಮಯ, ಜ್ಞಾನ ಉಪಯೋಗಿಸಿ ಮುಂದಿನ ಪೀಳಿಗೆಗೆ ಗ್ರಂಥಸ್ಥವಾಗಿ ಬರೆದಿಟ್ಟಿದ್ದಾರೆ. ಇಂತಹ ಜ್ಞಾನ ದೇಗುಲವೇ ಗ್ರಂಥಾಲಯ, ಗ್ರಂಥಾಲಯಕ್ಕೆ ಜ್ಞಾನದ ಕಣಜ ಎಂದು ಕರೆಯಲಾಗುತ್ತದೆ ಎಂದರು.
ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಸ್.ಬಿ. ಚನ್ನಗೌಡ್ರ, ನವೀನ ಯಲಿಗಾರ, ಪಿ.ಎಂ. ವಿಜಯಕುಮಾರ, ತ್ರೀವೇಣಿ ಕೋರಿ, ಎಸ್.ಎಸ್. ಹುಲ್ಲಿನಕೊಪ್ಪ, ಲತಾ ಬಿ.ವೈ, ಲಿಂಗರಾಜ ಹಲವಾಗಿಲ್, ಮೋಹನಕುಮಾರ ಕೆ.ಪಿ, ಲಕ್ಷ್ಮಣ ಗೌಡಗೇರಿ, ಆರ್.ಎಫ್.ದೊಡ್ಡಮನಿ, ಚಂದ್ರೇಗೌಡ ಸಿ.ಕೆ, ಕವಿತಾ ಅಣಜಿ ಇತರರು ಇದ್ದರು.