ಮೊಬೈಲ್​ಗಳ ಪರಿಣಾಮ ಮೆದುಳಿನ ಶಕ್ತಿ ಕ್ಷೀಣ

book
Published on

ಉಡುಪಿ: ಕಂಪ್ಯೂಟರ್​, ಮೊಬೈಲ್​ಗಳ ಪರಿಣಾಮವಾಗಿ ಮನುಷ್ಯ ತನ್ನ ಮೆದುಳಿನ ಶಕ್ತಿಯನ್ನು ಕಳೆದು ಕೊಳ್ಳುತ್ತಿದ್ದಾನೆ. ಹಾಗಾಗಿ ಓದುವ ಹವ್ಯಾಸ ಬೆಳೆಸಿಕೊಳ್ಳುವುದು ಅತೀ ಅಗತ್ಯವಾಗಿದೆ. ಪುಸ್ತಕ ಓದುವವುದರಿಂದ ಭಾಷೆೆ ಮೇಲೆ ಹಿಡಿತ ಬರುತ್ತದೆ ಎಂದು ಇಂಚರ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ವೈ.ಸುದರ್ಶನ್​ ರಾವ್​ ಅಭಿಪ್ರಾಯಪಟ್ಟರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​ ತಾಲೂಕು ಘಟಕ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ಭವನ ಸಮಿತಿ ಹಾಗೂ ಜಿಲ್ಲಾ ರೆಡ್​ಕ್ರಾಸ್​ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಪತ್ರಿಕಾ ಭವನದಲ್ಲಿ ಸ್ಥಾಪಿಸಲಾದ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್​ ಶೆಟ್ಟಿ ಅಲೆವೂರು ಅವರಿಗೆ ಉಡುಪಿ ಕನ್ನಡ ಮತ್ತು ಸಂಸತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪುಸ್ತಕ ಹಸ್ತಾಂತರಿಸಿದರು. ಜಿಲ್ಲಾ ರೆಡ್​ ಕ್ರಾಸ್​ ಸಂಸ್ಥೆಯ ಅಧ್ಯಕ್ಷ ಬಸ್ರೂರು ರಾಜೀವ ಶೆಟ್ಟಿ, ಕಾರ್ಯದರ್ಶಿ ಡಾ.ಗಣನಾಥ್​ ಎಕ್ಕಾರ್​, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್​, ಸಂಸತಿ ವಿಶ್ವ ಪ್ರತಿಷ್ಠ್ಠಾನದ ಸ್ಥಾಪಕ ವಿಶ್ವನಾಥ್​ ಶೆಣೈ ಮಾತನಾಡಿದರು.

ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿಗಳಾದ ಜನಾರ್ದನ್​ ಕೊಡವೂರು, ರಂಜನಿ ವಸಂತ್​, ಸದಸ್ಯರಾದ ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ, ವಸಂತ್​, ಕಸಾಪ ಜಿಲ್ಲಾ ಸಹ ಕಾರ್ಯದರ್ಶಿ ಮೋಹನ್​ ಉಡುಪ ಹಂದಾಡಿ, ಪತ್ರಕರ್ತರ ಸಂಘದ ಕೋಶಾಧಿಕಾರಿ ಉಮೇಶ್​ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್​ ಮಂಜನಬೈಲು, ಉಡುಪಿ ಪತ್ರಿಕಾ ಭವನ ಸಮಿತಿ ಸಂಚಾಲಕ ಅಜಿತ್​ ಆರಾಡಿ ಉಪಸ್ಥಿತರಿದ್ದರು.

ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್​ ಎಚ್​.ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್​ ಪೊಲ್ಯ ಸ್ವಾಗತಿಸಿದರು. ಮನೆಯೇ ಗ್ರಂಥಾಲಯದ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು. ಪತ್ರಕರ್ತ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net