

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಚಿಕ್ಕಬಳ್ಳಾಪುರ ನಗರದಲ್ಲಿನ ಸರ್ ಎಂ. ವಿ.ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ವಿವಿಧ ಶಾಲಾ ವಿದ್ಯಾರ್ಥಿಗಳು ಶುಕ್ರವಾರ ಭೇಟಿ ಮಾಡಿ, ಗ್ಯಾಲರಿ ವೀಕ್ಷಿಸಿದರು.
ಚಾಮರಾಜಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೊಳುಚಿನ್ನಪ್ಪನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಚಿಕ್ಕಬಳ್ಳಾಪುರ ನಗರದ ವಾಪಸಂದ್ರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಗಾಂಧಿ ಭವನ ಗ್ಯಾಲರಿಗೆ ವೀಸಿದರು. ಇದೇ ವೇಳೆ ಗಾಂಧೀಜಿಯವರ ಜೀವನ ಚರಿತ್ರೆಯ ಬಗ್ಗೆ ತಿಳಿದುಕೊಂಡರು.
ಪ್ರತಿಯೊಬ್ಬರು ಜ್ಞಾನಾರ್ಜನೆಗಾಗಿ ಹೆಚ್ಚಿಗೆ ಪುಸ್ತಕ ಓದುವ, ಗ್ರಂಥಾಲಯಗಳಿಗೆ ಭೇಟಿ ನೀಡುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಇದರ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಬೇಕು ಎಂದು ಗ್ರಂಥಾಲಯ ಅಧಿಕಾರಿ ಶಂಕರಪ್ಪ ತಿಳಿಸಿದರು.
ಈ ಸಂದರ್ಭದಲ್ಲಿ ಚಾಮರಾಜಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವೆಂಕಟಲಕ್ಷ್ಮಮ್ಮ, ಗೋಳುಚಿನ್ನಪ್ಪನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶಶಿಕಲಾ, ವಾಪಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಪಿ.ವಿ.ನೂತನ, ಟಿ.ಜಿ. ಗಿರಿಜಾದೇವಿ ಮತ್ತಿತರರು ಇದ್ದರು.